ಪರಪ್ಪನ ಅಗ್ರಹಾರ ಜೈಲಿಗೆ ತಮಿಳುನಾಡು ಸಿಎಂ ಪಳನಿಸ್ವಾಮಿ ಭೇಟಿ ಹಿನ್ನೆಲೆಯಲ್ಲಿ ಟೈಟ್ ಸೆಕ್ಯೂರಿಟಿ

ಈ ಸುದ್ದಿಯನ್ನು ಶೇರ್ ಮಾಡಿ

Parappana-Agraha-r-021

ಬೆಂಗಳೂರು, ಫೆ.17- ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾ ಅವರನ್ನು ಭೇಟಿ ಮಾಡಲಿರುವ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹದ ಸುತ್ತಮುತ್ತ ಪೊಲೀಸರು ಹೆಚ್ಚಿನ ಭದ್ರತೆ ಕೈಗೊಂಡಿದ್ದಾರೆ.  ಕಾರಾಗೃಹದ ಸುತ್ತ ಮೂರು ಕೆಎಸ್‍ಆರ್‍ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಗಡಿ ಭಾಗದಲ್ಲೂ ಕೂಡ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ನಿನ್ನೆ ಯಡಪ್ಪಾಡಿ ಪಳನಿಸ್ವಾಮಿ 30 ಸಚಿವರೊಂದಿಗೆ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಇಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ನಟರಾಜನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಹಾಗಾಗಿ ಭದ್ರತೆ ಕೈಗೊಳ್ಳಲಾಗಿದೆ.

ಎಂದಿನಂತೆ ಇಂದು ಸಹ ಮುಖ್ಯರಸ್ತೆಯಲ್ಲಿ ಬ್ಯಾರಿಕೇಡ್‍ಗಳನ್ನು ಹಾಕಿ ಭದ್ರತೆ ಕೈಗೊಳ್ಳಲಾಗಿದೆ. ಶಶಿಕಲಾ ಅವರನ್ನು ಜೈಲಿಗೆ ಕರೆತಂದ ಸಂದರ್ಭದಲ್ಲಿ ಪನ್ನೀರ್ ಸೆಲ್ವಂ ಬೆಂಬಲಿಗರು ಹಲವು ವಾಹನಗಳನ್ನು ಜಖಂಗೊಳಿಸಿದ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.  ಜೈಲಿನಲ್ಲಿರುವ ಶಶಿಕಲಾ ಅವರು ಕಳೆದ ಎರಡು ದಿನಗಳಿಗಿಂತ ಇಂದು ಲವಲವಿಕೆಯಿಂದ ಇದ್ದಾರೆ. ಬೆಳಗ್ಗೆ 6 ಗಂಟೆಗೆ ಎದ್ದು ಯೋಗ ಮತ್ತು ವಾಕಿಂಗ್ ಮಾಡಿ ಜೈಲಿನ ಇಂದಿನ ಉಪಹಾರ ಸೇವಿಸಿ ಶಶಿಕಲಾ ಇಳವರಸಿ ಮತ್ತು ಸುಧಾಕರನ್ ಜತೆ ಮಾತನಾಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin