ಪರಪ್ಪನ ಅಗ್ರಹಾರ ಜೈಲಿಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

Parappana-Agraha-r-021

ಬೆಂಗಳೂರು, ಆ.1-ರಾಜ್ಯ ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಆ.4 ರಂದು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅಧ್ಯಕ್ಷರಾಗಿರುವ ಈ ಸಮಿತಿಯು ಆ.4 ರಂದು ಮಧ್ಯಾಹ್ನ 12.30ಕ್ಕೆ ಕಾರಾಗೃಹಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿವೀಕ್ಷಣೆ ಮಾಡಲಿದೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರಿಗೆ ವಿಶೇಷ ಸೌಲಭ್ಯ ಒದಗಿಸಿದ ಆರೋಪ ಹಾಗೂ ಇದಕ್ಕಾಗಿ ಹಣ ಪಡೆದ ಆರೋಪಗಳು ವರದಿಯಾಗಿದ್ದವು. ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಈ ಸಮಿತಿ ನೀಡುತ್ತಿರುವ ಭೇಟಿಗೆ ಹೆಚ್ಚಿನ ಮಹತ್ವ ದೊರೆಯಲಿದೆ.

ಆ.4ರಂದು ಬೆಳಗ್ಗೆ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106ರಲ್ಲಿ ಸಭೆ ಸೇರಿ ಒಂದು ಗಂಟೆ ಕಾಲ ಚರ್ಚೆ ನಡೆಸಲಿದೆ. ನಂತರ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಲಿದೆ.  ಕಾರಾಗೃಹದಲ್ಲಿ ಭಾರತ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿಗೆ ಸಂಬಂಧಿಸಿದಂತೆ ಸಭೆ ನಡೆಸಲಿದೆ. ಅಲ್ಲದೆ, ಕಾರಾಗೃಹದಲ್ಲಿ ಆಂತರಿಕ ನಿಯಂತ್ರಣಾ ವ್ಯವಸ್ಥೆಯ ಅನುಪಾಲನೆ ಲೆಕ್ಕಪರಿಶೋಧನೆ ವಿಷಯ ಕುರಿತ ಸಭೆ ನಡೆಸಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin