ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳ ನಡುವೆ ಘರ್ಷಣೆ

ಈ ಸುದ್ದಿಯನ್ನು ಶೇರ್ ಮಾಡಿ

Jail-01

ಬೆಂಗಳೂರು, ನ.1- ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ವಿಚಾರಣಾ ಖೈದಿಗಳ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದು ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಜೈಲಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗಿದೆ. ನಿನ್ನೆ ರಾತ್ರಿ 7 ಗಂಟೆಯಲ್ಲಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ಜಾಫರ್ ಮತ್ತು ರೌಡಿ ಶೀಟರ್ ಜಗ್ಗದ ಗುಂಪಿನ ನಡುವೆ ಕಾರಾಗೃಹದ ಅಡುಗೆ ಮನೆ ಬಳಿ ಘರ್ಷಣೆ ನಡೆದಿದೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. ಘರ್ಷಣೆ ವೇಳೆ ಅಡುಗೆ ಮನೆಯಲ್ಲಿದ್ದ ಸೌದೆ, ತಟ್ಟೆ, ಕಟ್ಟಿಗೆ, ಸೌಟು ಇನ್ನಿತರೆ ವಸ್ತುಗಳನ್ನು ತೆಗೆದುಕೊಂಡು ಬಡಿದಾಡಿಕೊಂಡಿದ್ದಾರೆ. ಘರ್ಷಣೆಯಿಂದಾಗಿ ನಾಲ್ವರು ಗಾಯಗೊಂಡಿದ್ದು, ತಕ್ಷಣ ಜೈಲಿನ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟೆಗೆ ತರುವ ಮೂಲಕ ಬಾರೀ ಘರ್ಷಣೆಯನ್ನು ತಪ್ಪಿಸಿದ್ದಾರೆ.ಗಾಯಾಳುಗಳಿಗೆ ಕಾರಾಗೃಹದ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗಿದೆ.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin