ಪರಭಾಷಿಕರಿಂದ ಕನ್ನಡ ಉಳಿಸಿ, ಬೆಂಗಳೂರಲ್ಲಿ ಅಪರಾಧ ಸಂಖ್ಯೆ ಇಳಿಸಿ

ಈ ಸುದ್ದಿಯನ್ನು ಶೇರ್ ಮಾಡಿ

vatal-nagraj

ಬೆಂಗಳೂರು, ಡಿ.6- ಅಪರಾಧಗಳ ಸಂಖ್ಯೆಯಲ್ಲಿ ಬೆಂಗಳೂರು 2ನೆ ಸ್ಥಾನ ಪಡೆದಿರುವುದು ಕನ್ನಡಿಗರು ತಲೆ ತಗ್ಗಿಸುವಂತಹ ವಿಷಯವಾಗಿದ್ದು, ಈ ಬಗ್ಗೆ ಸರ್ಕಾರ ಅಪರಾಧಗಳ ಸಂಖ್ಯೆ ಇಳಿಮುಖವಾಗುವಂತೆ ನೋಡಿಕೊಳ್ಳಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದಿಲ್ಲಿ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊಲೆ, ಸರಗಳ್ಳತನ, ಸುಲಿಗೆ, ದರೋಡೆ, ಅತ್ಯಾಚಾರ, ಸಂಚಾರ ನಿಯಮಗಳ ಉಲ್ಲಂಘನೆಯಂತಹ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದು ಅನ್ಯ ಭಾಷಿಗರು, ವಲಸಿಗರಿಂದಲೇ ಹೊರತು ಕನ್ನಡಿಗರಿಂದಲ್ಲ. ವಲಸಿಗರ ಹಾವಳಿ ಹೆಚ್ಚುತ್ತಿರುವುದರಿಂದ ಅಪರಾಧಗಳ ಸಂಖ್ಯೆ ಹೆಚ್ಚಾಗಿ ಕನ್ನಡಿಗರ ಗೌರವಕ್ಕೆ ಧಕ್ಕೆಯಾಗುತ್ತಿರುವುದು ದುರದೃಷ್ಟಕರ ಎಂದು ವಾಟಾಳ್ ವಿಷಾದಿಸಿದರು.

ಬಿಹಾರ, ಉತ್ತರ ಪ್ರದೇಶ, ಪಂಜಾಬ್, ಈಶಾನ್ಯ ರಾಜ್ಯಗಳಲ್ಲದೆ ಆಫ್ರಿಕಾ, ನೈಜೀರಿಯಾ, ಉಗಾಂಡ ಸೇರಿದಂತೆ ವಿವಿಧ ದೇಶ-ವಿದೇಶಿಗರು ನಗರದಲ್ಲಿ ನೆಲೆಸಿ ಸಮಾಜಘಾತುಕ, ಅಪರಾಧ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಇದರಿಂದ ನಮ್ಮ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ವಿಷಾದಿಸಿದರು.  ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಿಗರಿಗಿಂತ ವಲಸಿಗರೇ ಹೆಚ್ಚಾಗಿದ್ದಾರೆ. ಅವರ ಹಾವಳಿ ಮಿತಿಮೀರುತ್ತಿದೆ. ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕನ್ನಡಿಗರಿಗೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಅವರು ಆತಂಕ ವ್ಯಕ್ತಪಡಿಸಿದರು. ವಲಸಿಗರಿಂದ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ, ಅಪರಾಧಗಳ ಸಂಖ್ಯೆ ತಗ್ಗಿಸಲು ಆಗ್ರಹಿಸಿ ಡಿ.16ರಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ವತಿಯಿಂದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸುವುದಾಗಿ ಅವರು ತಿಳಿಸಿದರು.

Facebook Comments

Sri Raghav

Admin