ಪರಿಶಿಷ್ಟ ಜಾತಿ-ಪಂಗಡದವರಿಗೆ ಸರ್ಕಾರದಿಂದ ಪ್ರೋತ್ಸಾಹಧನ

ಈ ಸುದ್ದಿಯನ್ನು ಶೇರ್ ಮಾಡಿ

Bonus-01

ಬೆಂಗಳೂರು, ಜೂ.3- ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ವಿವಿಧ ಯೋಜನೆಗಳಡಿಯಲ್ಲಿ ಪ್ರೋತ್ಸಾಹಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಪರಿಶಿಷ್ಟ ಜಾತಿ-ಪಂಗಡದ ವಿಧವೆಯರು ಮರು ವಿವಾಹವಾದಲ್ಲಿ ಅವರಿಗೆ 3 ಲಕ್ಷ ರೂ.ಗಳ ಪ್ರೋತ್ಸಾಹ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪಂಗಡದ ಯುವಕ-ಯುವತಿಯರು ಪರಿಶಿಷ್ಟ ಜಾತಿ-ಪಂಗಡದ ಸಮುದಾಯದೊಳಗೆ ಅಂತರ್‍ಜಾತಿ ವಿವಾಹವಾದಲ್ಲಿ ಅಂತಹವರಿಗೆ 2ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಲಾಗುವುದು.ಪರಿಶಿಷ್ಟ ಜಾತಿ-ಪಂಗಡದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ ಮಾಸಿಕ ತರಬೇತಿ ಭತ್ಯೆಯನ್ನು 5000ರೂ.ಗಳಿಗೆ ಹೆಚ್ಚಿಸಲಾಗಿದೆ. ಪರಿಶಿಷ್ಟ ಜಾತಿ-ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಹಾಲಿನ ದರವನ್ನು ಪರಿಷ್ಕರಿಸಿ ನೀಡಲಾಗುತ್ತಿದೆ. ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ.ಗಳನ್ನು ಹೊಂದಿರುವ ಪರಿಶಿಷ್ಟ ಜಾತಿ-ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಪಡೆಯಲು ಮ್ಯಾನೇಜ್‍ಮೆಂಟ್ ಕೋಟಾದಡಿ ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಶುಲ್ಕ ಪಾವತಿ ಮಾಡಲು ಅರ್ಹತೆ ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin