ಪರಿಷತ್‍ನಲ್ಲಿ ಪರಿಷತ್‍ನಲ್ಲಿ ಪ್ರತಿಧ್ವನಿಸಿದ ಅಂಗನವಾಡಿ ಕಾರ್ಯಕರ್ತೆಯರ ಧರಣಿ ವಿಚಾರ

ಈ ಸುದ್ದಿಯನ್ನು ಶೇರ್ ಮಾಡಿ

Tumakuru--06

ಬೆಂಗಳೂರು, ಮಾ.21- ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ನಗರದ ಫ್ರೀಡಂಪಾರ್ಕ್‍ನಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ವಿಧಾನ ಪರಿಷತ್‍ನಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಭಾರೀ ಮಾತಿನ ಚಕಮಕಿ ನಡೆದು ಸದನ ಮುಂದೂಡಿದ ಪ್ರಸಂಗ ನಡೆಯಿತು.  ಶೂನ್ಯವೇಳೆಯಲ್ಲಿ ಬಿಜೆಪಿ ಸದಸ್ಯರಾದ ತಾರಾ ಅನುರಾಧಾ, ಚೌಡಾರೆಡ್ಡಿ ಮತ್ತು ಜೆಡಿಎಸ್ ಸದಸ್ಯರಾದ ಬಸವರಾಜ ಹೊರಟ್ಟಿ ಸೇರಿದಂತೆ ಮತ್ತಿತರ ಸದಸ್ಯರು ವಿಷಯ ಪ್ರಸ್ತಾಪಿಸಿ ತಕ್ಷಣ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿದರು.

ಸರ್ಕಾರದ ಪರವಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಸಚಿವರಿಂದ ಸಂಪೂರ್ಣ ಮಾಹಿತಿ ಪಡೆದು ಸಮಸ್ಯೆ ಬಗೆಹರಿಸಲಾಗುವುದು ಎಂದು ಉತ್ತರ ನೀಡಿದರು. ಇದರಿಂದ ಕೆರಳಿದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ಆರಂಭಿಸಿದರು. ಇದು ಗಂಭೀರ ವಿಷಯವಾಗಿದ್ದು, 15 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಹಾಗೂ ಸಂಬಂಧಪಟ್ಟ ಸಚಿವರು ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬಹುದು. ಆದರೆ, ಸಚಿವರು ಅಲ್ಲಿಗೇ ಬಂದು ಉತ್ತರ ನೀಡುತ್ತೇವೆ ಎಂದು ಹೇಳಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin