ಪರಿಸ್ಥಿತಿ ಆಧರಿಸಿ ಕಫ್ರ್ಯೂ ಮುಂದುವರಿಸುವ ನಿರ್ಧಾರ : ಮೇಘರಿಕ್

ಈ ಸುದ್ದಿಯನ್ನು ಶೇರ್ ಮಾಡಿ

Megharik

ಬೆಂಗಳೂರು, ಸೆ.13- ನಗರದ 16 ಜಾಲೀಸ್ ಠಾಣೆ ವ್ಯಾಪ್ತಿಗಳಲ್ಲಿ ವಿಧಿಸಿರುವ ಕಫ್ರ್ಯೂವನ್ನು ಪರಿಸ್ಥಿತಿ ನೋಡಿಕೊಂಡು ಮುಂದುವರಿಸಬೇಕೆ ಅಥವಾ ಬೇಡವೇ ಎಂಬುದನ್ನು ಸಂಜೆ ನಿರ್ಧರಿಸಲಾಗುವುದು ಎಂದು ಬೆಂಗಳೂರು ನಗರದ ಜಾಲೀಸ್ ಕಮಿಷನರ್ ಮೇಘರಿಕ್ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಉಳಿದಂತೆ ನಗರದಾದ್ಯಂತ ನಾಳೆ ರಾತ್ರಿವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.  ಉತ್ತರ ಹಾಗೂ ಪಶ್ಚಿಮ ವಿಭಾಗದ 16 ಜಾಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಿನ್ನೆ ರಾತ್ರಿಯಿಂದ ಕಫ್ರ್ಯೂ ಜಾರಿಗೊಳಿಸಲಾಗಿದೆ. ರಾತ್ರಿ 11 ಗಂಟೆಯಿಂದ ಈವರೆಗೂ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ ಎಂದರು.

ರಾಜಗೋಪಾಲನಗರ, ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಗಳಲ್ಲಿ ಸ್ವಲ್ಪ ಬಿಗುವಿನ ವಾತಾವರಣವಿದೆ ಎಂದು ಅವರು ತಿಳಿಸಿದ್ದಾರೆ. ಸ್ಥಳೀಯ ಜಾಲೀಸರ ಜತೆಗೆ 10 ಕಂಪೆನಿ ಆರ್ಎಎಫ್, ಅರೆಸೇನಾ ಪಡೆಗಳನ್ನು ಕರೆಸಿಕೊಳ್ಳಲಾಗಿದೆ. ಅವುಗಳನ್ನು ನಿನ್ನೆ ಘಟನೆ ನಡೆದ ಪ್ರದೇಶದಲ್ಲಿ ನಿಯೋಜಿಸಲಾಗುವುದು. ಒಟ್ಟಾರೆ ನಗರದಾದ್ಯಂತ ಬಿಗಿ ಜಾಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಅಧಿಕಾರಿಗಳು ಗಸ್ತಿನಲ್ಲಿದ್ದು, ಕಟ್ಟೆಚ್ಚರ ವಹಿಸಲಾಗಿದೆ ಎಂದು ಮೇಘರಿಕ್ ಹೇಳಿದರು.

► Follow us on –  Facebook / Twitter  / Google+

Facebook Comments

Sri Raghav

Admin