ಭೀಕರ ಅಪಘಾತ ಸಿಸಿಟಿವಿಯಲ್ಲಿ ಸೆರೆ, ಪವಾಡ ಸದೃಶ ರೀತಿಯಲ್ಲಿ ಪಾರಾದ ಬೈಕ್ ಸವಾರ (ವಿಡಿಯೋ)

ಈ ಸುದ್ದಿಯನ್ನು ಶೇರ್ ಮಾಡಿ

ನೆಲಮಂಗಲ, ಆ.18- ಬಸ್‍ಗೆ ಬೈಕ್ ಡಿಕ್ಕಿ ಹೊಡೆದು ಚಕ್ರಕ್ಕೆ ಸಿಲುಕಿಕೊಂಡರೂ ಸವಾರನೊಬ್ಬ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ರಮೇಶ್ (35) ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿವರ:

ನಿನ್ನೆ ಸಂಜೆ ಪಟ್ಟಣದ ವೀವರ್ಸ್ ಕಾಲೋನಿಯಲ್ಲಿ ರಮೇಶ್ ಬೈಕ್‍ನಲ್ಲಿ ಹೋಗುತ್ತಿದ್ದಾಗ ಬಸ್ ಅಡ್ಡ ಬಂದಿದೆ. ಈ ವೇಳೆ ಬಸ್ ಕೆಳಗೆ ಬೈಕ್ ನುಗ್ಗಿ ಚಕ್ರಕ್ಕೆ ಸಿಲುಕಿದೆ. ತಕ್ಷಣ ಸ್ಥಳೀಯರು ಕೂಗಿಕೊಂಡು ಸ್ಥಳಕ್ಕೆ ಧಾವಿಸಿ ಬಸ್ ಕೆಳಗಿದ್ದ ರಮೇಶ್ ಅವರನ್ನು ಹೊರಗೆ ಎಳೆದು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಅದೃಷ್ಟವಶಾತ್ ರಮೇಶ್ ಅವರಿಗೆ ಯಾವುದೇ ಅಪಾಯವಾಗಿಲ್ಲ. ಸ್ವಲ್ಪ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಘಟನೆಯ ಬಳಿಕ ಬಸ್ ಅಲ್ಲಿಯೇ ಬಿಟ್ಟು ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದಾರೆ. ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಇದು ವೈರಲ್ ಆಗಿದೆ. ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

Facebook Comments

Sri Raghav

Admin