ಪಶು ವೈದ್ಯರು-ನೌಕರರಿಂದ ಅನಿರ್ದಿಷ್ಟ ಕಾಲ ಮುಷ್ಕರ

ಈ ಸುದ್ದಿಯನ್ನು ಶೇರ್ ಮಾಡಿ

chikkamangaluru

ಚಿಕ್ಕಮಗಳೂರು, ಮೇ 17-ವೃಂದ ಮತ್ತು ನೇಮಕಾತಿ ನಿಯಮಗಳ ಅಂತಿಮ ಅಧಿಸೂಚನೆಯನ್ನು ಹೊರಡಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಪಶುವೈದ್ಯರು, ಪಶುವೈದ್ಯಕೀಯ ಪರೀಕ್ಷಕರು ಹಾಗೂ ಪಶು ಇಲಾಖೆಯ ನೌಕರರು ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟ ಕಾಲದ ಮುಷ್ಕರ ಆರಂಭಿಸಿದರು.
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಪಶುವೈದ್ಯರು, ಪಶುವೈದ್ಯಕೀಯ ಪರೀಕ್ಷಕರು ಮತ್ತು ನೌಕರರು ಪಶುವೈದ್ಯಕೀಯ ಸಂಘ, ಪಶು ವೈದ್ಯಕೀಯ ಪರೀಕ್ಷಕರ ಸಂಘ ಹಾಗೂ ಪಶು ವೈದ್ಯಕೀಯ ಸಹಾಯಕರ ಸಂಘದ ನೇತೃತ್ವದಲ್ಲಿ ನಗರದ ಪಶುಪಾಲನಾ ಇಲಾಖೆಯ ಉಪನಿರ್ದೇಶಕರ ಕಛೇರಿ ಎದುರು ಪ್ರತಿಭಟನೆ ನಡೆಸಿ ನಂತರ ಕಛೇರಿಯ ಆವರಣದಲ್ಲಿ ಅನಿರ್ದಿಷ್ಠಕಾಲದ ಧರಣಿ ಆರಂಭಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಶುವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ.ಎ.ಬಿ.ಪ್ರಭಾಕರ್ ವೃಂದ ಮತ್ತು ನೇಮಕಾತಿ ನಿಯಮಗಳು ಜÁರಿಗೆ ಬಾರದೇ ಕಳೆದ ಐದು ವರ್ಷಗಳಿಂದ ಇಲಾಖೆಯಲ್ಲಿ ನೆನೆಗುದಿಗೆ ಬಿದ್ದಿದ್ದು ಇದರಿಂದಾಗಿ ರಾಜ್ಯಾಧ್ಯಂತ ಸಹಸ್ರಾರು ಪಶು ಪರೀಕ್ಷಕರು, ಪಶುವೈದ್ಯರು ಮತ್ತು ಸಹಾಯಕರು ವರ್ಗಾವಣೆ ಮತ್ತು ಬಡ್ತಿ ಇಲ್ಲದೆ ಅತಂತ್ರರಾಗಿದ್ದಾರೆ ಎಂದು ಆರೋಪಿಸಿದರು.ಕಳೆದ 15-20 ವರ್ಷಗಳಿಂದ ಇಲಾಖೆಯಲ್ಲಿ ದುಡಿಯುತ್ತಿರುವವರು ಬಡ್ತಿಯಿಂದ ವಂಚಿತರಾಗಿದ್ದಾರೆ ಇದರಿಂದಾಗಿ ವೇತನದಲ್ಲಿ ಹೆಚ್ಚಳವಾಗದೇ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ ಎಂದು ದೂರಿದರು.

ಮುಷ್ಕರದಿಂದಾಗಿ ಜಾನುವಾರುಗಳಿಗೆ ಚಿಕಿತ್ಸೆ ದೊರೆಯದೆ ತೊಂದರೆಯಾಗಲಿರುವ ಹಿನ್ನೆಲೆಯಲ್ಲಿ ರೈತರು ಸಹಕರಿಸುವಂತೆ ಮನವಿ ಮಾಡಿದರು.
ಪಶುವೈದ್ಯಕೀಯ ಸಂಘದ ಜಿಲ್ಲಾ ಗೌರವಾಧ್ಯಕ್ಷ ಡಾ.ಡಿ.ಪ್ರಭುಲಿಂಗು, ಉಪಾಧ್ಯಕ್ಷ ಡಾ.ಎಸ್.ಕಿರಣ್‍ಕುಮಾರ್, ಪಶುವೈದ್ಯಕೀಯ ಪರೀಕ್ಷಕರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಬಿ.ಪದ್ಮೇಗೌಡ, ಪ್ರಧಾನ ಕಾರ್ಯದರ್ಶಿ ಬಿ.ಎಂ.ಪ್ರಕಾಶ್, ಖಜಾಂಚಿ  ಎನ್.ಎಸ್.ಜಯದೇವಮೂರ್ತಿ, ಪಶುವೈದ್ಯಕೀಯ ಸಹಾಯಕರ ಸಂಘದ ಜಿಲ್ಲಾಧ್ಯಕ್ಷ ಕೆ.ಪಿ.ಪ್ರಭುಕುಮಾರ್, ಪ್ರಧಾನ ಕಾರ್ಯದರ್ಶಿ ಹೆಚ್.ಎನ್.ಗಿರೀಶ್, ಖಜಾಂಚಿ  ಜಿ.ರಘುನಂದನ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin