ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಮತ್ತೊಮ್ಮೆ ಭಾರಿ ಮುಖಭಂಗ..!

ಈ ಸುದ್ದಿಯನ್ನು ಶೇರ್ ಮಾಡಿ

Pakistan-UN--01

ವಿಶ್ವಸಂಸ್ಥೆ, ಮೇ 25-ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಮತ್ತೊಮ್ಮೆ ಮುಖಭಂಗವಾಗಿದೆ. ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಬಳಿ ತನ್ನ ಸೇನಾ ವೀಕ್ಷಕರ ಮೇಲೆ ಭಾರತೀಯ ಯೋಧರು ದಾಳಿ ನಡೆಸಿದ್ದಾರೆ ಎಂಬ ಪಾಕಿಸ್ತಾನ ಸೇನೆ ಹೇಳಿಕೆಯನ್ನು ವಿಶ್ವಸಂಸ್ಥೆ ತಳ್ಳಿ ಹಾಕಿದೆ. ಪಾಕ್ ಹೇಳಿಕೆಗೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಸಂಯುಕ್ತ ರಾಷ್ಟ್ರಗಳ ಮಹಾಸಂಸ್ಥೆ ಸ್ಪಷ್ಟಪಡಿಸಿದೆ.ಖಾನ್‍ಝಾರ್ ವಲಯದ ಎಲ್‍ಒಸಿಯಲ್ಲಿ ಭಾರತೀಯ ಸೇನೆಯಿಂದ ಯುಎನ್‍ಎಂಒಜಿಐಪಿ(ಭಾರತ ಮತ್ತು ಪಾಕಿಸ್ತಾನದಲ್ಲಿನ ವಿಶ್ವಸಂಸ್ಥೆ ಸೇನಾ ವೀಕ್ಷಕ ಸಮೂಹ) ವಾಹನದ ಮೇಲೆ ದಾಳಿ ನಡೆದಿದೆ ಎಂಬ ಪಾಕ್ ಆರೋಪಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ವಿಶ್ವಸಂಸ್ಥೆ ಮಹಾ ಪ್ರಧಾನಕಾರ್ಯದರ್ಶಿ ಅಂಟೋನಿಯೋ ಗುಟೆರ್ರಸ್ ಅವರ ವಕ್ತಾರ ಸ್ಟೇಪಾನೆ ಡುಜರ್ರಿಕ್ ಹೇಳಿದ್ದಾರೆ.

ಪಾಕಿಸ್ತಾನ ಆಡಳಿತ ಇರುವ ಕಾಶ್ಮೀರದ ಭಿಂಬರ್ ಜಿಲ್ಲೆಯಲ್ಲಿ ಪಾಕಿಸ್ತಾನಿ ಸೇನಾಪಡೆಯೊಂದಿಗೆ ಯುಎನ್‍ಎಂಒಜಿಐಪಿ ಮಿಲಿಟರಿ ವೀಕ್ಷಕರು ವಾಹನದಲ್ಲಿ ತೆರಳುತ್ತಿದ್ದಾಗ ಬಂದೂಕು ಗುಂಡುಗಳ ಮೊರೆತ ಕೇಳಿಬಂದಿತ್ತು. ಇದರಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin