ಪಾಕಿಸ್ತಾನದ ಹಿಜ್ಬುಲ್ ಭಯೋತ್ಪಾದಕ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Arrest

ಶ್ರೀನಗರ, ಮಾ.21-ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭದ್ರತಾಪಡೆಗಳೊಂದಿಗೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರಗಾಮಿ ಸಂಘಟನೆಯ ಭಯೋತ್ಪಾದಕನೊಬ್ಬನನ್ನು ಬಂಧಿಸಿ, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ತಕ್ರಾಕೋಟೆ ಜಿಲ್ಲೆಯ ರಿಯಾಸಿ ಪ್ರದೇಶ ಕಕ್ಕಾ ಚಿಂಖಾ ಗ್ರಾಮದ ನಿಜಾಮುದ್ದೀನ್ ಪೋಗ್ಲಿಯ ಮನೆಯಿಂದ ಸಬಝರ್ ಅಹಮದ್ ಮಾಂಟೋ ಎಂಬ ಹಿಬ್‍ಬುಲ್ ಉಗ್ರನನ್ನು ಸೆರೆ ಹಿಡಿಯಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾಂಟೂ ಸಿ-ವರ್ಗದ ಉಗ್ರಗಾಮಿಯಾಗಿದ್ದು, ಈ ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ. ಧಮಾಲ್ ಹಂಜೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ, ಲೂಟಿ ಮೊದಲಾದ ಪ್ರಕರಣಗಳಲ್ಲಿ ಈತ ಶಾಮೀಲಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ.   ಪೊಲೀಸರು ಈ ತಿಂಗಳ ಆರಂಭದಲ್ಲಿ ಶ್ರೀನಗರದಲ್ಲಿ ಮೂವರು ಹಿಜ್‍ಬುಲ್ ಉಗ್ರರನ್ನು ಬಂಧಿಸಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin