ಪಾಕಿಸ್ತಾನ ಸೇನೆಗೆ ನೂತನ ಮುಖ್ಯಸ್ಥರಾಗಿ ಲೆ.ಜ.ಖಮರ್ ಬಜ್ವಾ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

Pakistan-army

ಇಸ್ಲಾಮಾಬಾದ್. ನ.26 : ಪಾಕಿಸ್ತಾನ ಸೇನೆಯ ಮಾಜಿ ಮುಖ್ಯಸ್ಥ ರಾಹಿಲ್ ಷರೀಫ್ ಅವರ ಅಧಿಕಾರವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಪಾಕಿಸ್ತಾನ ಸೇನೆಗೆ ನೂತನ ಮುಖ್ಯಸ್ಥರನ್ನು ನೇಮಕ ಮಾಡಲಾಗಿದೆ. ಸೇನೆಯ ಮುಖ್ಯಸ್ಥರಾಗಿ ಲೆ.ಜ.ಖಮರ್ ಬಜ್ವಾ ಅವರನ್ನು ನೇಮಕ ಮಾಡಿ ಪ್ರಧಾನಿ ನವಾಜ್ ಷರೀಫ್ ಆದೇಶ ಹೊರಡಿಸಿದ್ದಾರೆ. ಪಾಕಿಸ್ತಾನ ಸೇನೆಯ ಮುಖ್ಯಸ್ಥ ರಾಹಿಲ್ ಷರೀಫ್ ರಾಹಿಲ್ ಷರೀಫ್ ಅವರ ಅಧಿಕಾರವಧಿ ನವೆಂಬರ್ 29 ರಂದು ಮುಕ್ತಾಯವಾಗಲಿದ್ದು, ಅಂದೇ ಲೆಫ್ಟೆನೆಂಟ್ ಜನರಲ್ ಖಮರ್ ಬಜ್ವಾ ಸೇನಾ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ತಿಳಿಸಿದ್ದಾರೆ. ಲೆಫ್ಟೆನೆಂಟ್ ಜನರಲ್ ಖಮರ್ ಬಜ್ವಾ ಸೇನೆಯ ತರಬೇತಿ ಮತ್ತು ಸೇನಾ ಅಭಿವೃದ್ಧಿಯ ಐಜಿಯಾಗಿ ಕಾರ್ಯನಿರ್ವಹಿಸಿ ಅನುಭವ ಹೊಂದಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin