ಪಾಕ್ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ
ಈ ಸುದ್ದಿಯನ್ನು ಶೇರ್ ಮಾಡಿ
ಜಮ್ಮು,ಏ.3- ಕಲಹಪ್ರಿಯ ರಾಷ್ಟ್ರ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿನ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಸೇನಾ ನೆಲೆಗಳು ಮತ್ತು ನಾಗರಿಕರನ್ನು ಗುರಿಯಾಗಿಟ್ಟುಕೊಂಡು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಪಾಕಿಸ್ತಾನ ಸೇನೆ ಗುಂಡು ಹಾರಿಸಿದೆ.
ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ದಾಳಿ ನಡೆಸಿದ್ದು, ಕೆಲಕಾಲ ಗುಂಡಿನ ಚಕಮಕಿ ನಡೆಯಿತು ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ.
ಪೂಂಚ್ನ ಎಲ್ಒಸಿಯಲ್ಲಿ ಇಂದು ಬೆಳಗ್ಗೆ 9.30ರಲ್ಲಿ ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಮಾರ್ಟಾರ್ಗಳಿಂದ ಪಾಕಿಸ್ತಾನಿ ಸೇನೆ ಮನಬಂದಂತೆ ಗುಂಡು
ಹಾರಿಸಿತು.ಇದರಿಂದ ಗಡಿ ಭಾಗದ ದಿಗ್ವಾರ್ ಪ್ರದೇಶದಲ್ಲಿ ನಾಗರಿಕರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments