ಪಾಕ್‍ನಿಂದ 3ನೇ ದಿನವೂ ಶೆಲ್ ದಾಳಿ : ಯೋಧರ ದಿಟ್ಟ ಪ್ರತ್ಯುತ್ತರ

ಈ ಸುದ್ದಿಯನ್ನು ಶೇರ್ ಮಾಡಿ

Firing--01

ಜಮ್ಮು, ಅ.4-ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಮುಂಚೂಣಿ ಸೇನಾ ನೆಲೆಗಳು ಮತ್ತು ಗ್ರಾಮಗಳನ್ನು ಗುರಿಯಾಗಿಟ್ಟುಕೊಂಡು ಪಾಕಿಸ್ತಾನಿ ಸೇನಾಪಡೆಗಳು ಇಂದು ಸಹ ಗುಂಡಿನ ದಾಳಿ ನಡೆಸಿ ಶೆಲ್‍ಗಳನ್ನು ಉಡಾಯಿಸಿದೆ.  ಭಾರತೀಯ ಯೋಧರು ಪಾಕಿಸ್ತಾನಕ್ಕೆ ಪರಿಣಾಮಕಾರಿಯಾಗಿ ದಿಟ್ಟ ಉತ್ತರ ನೀಡಿದ್ದು, ಗಡಿಯಲ್ಲಿ ಗುಂಡಿನ ಚಕಮಕಿ ಮುಂದುವರಿದಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಪಾಕ್ ಸೈನಿಕರು ಮೂರನೇ ದಿನವಾದ ಇಂದು ಕೂಡ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿ ನಡೆಸಿದ್ದಾರೆ. ಬೆಳಗ್ಗೆ 8.45ರಲ್ಲಿ ಸಣ್ಣ ಶಸ್ತ್ರಾಸ್ತ್ರಗಳು, ಸ್ವಯಂಚಾಲಿತ ಆಯುಧಗಳು ಮತ್ತು ಮಾರ್ಟರ್‍ಗಳಿಂದ ದಾಳಿ ನಡೆಸಿದ್ದಾರೆ. ನಮ್ಮ ಯೋಧರೂ ಪ್ರತಿದಾಳಿ ಮೂಲಕ ಪ್ರತ್ಯುತ್ತರ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.  ಪೂಂಚ್‍ನಲ್ಲಿ ನಿನ್ನೆ ಪಾಕಿಸ್ತಾನಿ ಯೋಧರು ನಡೆಸಿದ ಅಪ್ರಚೋದಿತ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದರು. ಅ.2ರಂದು ಪಾಕಿಸ್ತಾನದ ಗುಂಡಿನ ದಾಳಿಯಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಮೂವರು ಮೃತಪಟ್ಟು 12 ಮಂದಿ ಗಾಯಗೊಂಡಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin