ಪಾಠದ ಜೊತೆಯಲ್ಲಿ ಕ್ರೀಡೆಗೂ ಮಾನತ್ಯೆ ನೀಡಬೇಕು:ಜಿ ಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್

ಈ ಸುದ್ದಿಯನ್ನು ಶೇರ್ ಮಾಡಿ

chitra-durga

ಚಿತ್ರದುರ್ಗ,ಆ.24-ಪಾಠದ ಜೊತೆಯಲ್ಲಿ ಕ್ರೀಡೆಗೂ ಮಾನತ್ಯೆ ನೀಡಬೇಕು, ಮಾನಸಿಕವಾಗಿ ಸಧೃಢವಾಗಿದ್ದರೆ ಸಾಲದು ದೈಹಿಕವಾಗಿ ಸಧೃಢವಾಗಿರಬೇಕಿದೆ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಗರದ ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸೊಂಡೇಕೊಳದ ಶ್ರೀ ವೀರಭದ್ರಸ್ವಾಮಿ ಪ್ರೌಢಶಾಲೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಚಿತ್ರದುರ್ಗ ತಾಲ್ಲೂಕು ಕಸಬಾ ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆಯಿಂದ ದೈಹಿಕ, ಬೌದ್ಧಿಕ ಹಾಗೂ ಮಾನಸಿಕ ಪ್ರಗತಿಯಾಗುತ್ತದೆ. ಸಡಗರದಿಂದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಈ ಸಂಭ್ರಮ ಸದಾಕಾಲ ಇರಬೇಕು. ಸರ್ಕಾರದ ಸೌಲಭ್ಯ ಬಳಸಿಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಹೊಂದಬೇಕು ಎಂದು ಹೇಳಿದರು. ತಾಪಂ ಅಧ್ಯಕ್ಷ ವೇಣುಗೋಪಾಲ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮನುಷ್ಯನ ಸಾಮರ್ಥ್ಯ ವೃದ್ಧಿಗೆ ಕ್ರೀಡೆಗಳು ಅವಶ್ಯಕ. ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ಕ್ರೀಡೆ ಸಹಕಾರಿಯಾಗಿದೆ ಎಂದರು.
ವೀರಭದ್ರಸ್ವಾಮಿ ಪ್ರೌಢಶಾಲೆ ಮುಖ್ಯ ಶಿಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿಗಳು, ತೀರ್ಪುಗಾರರು, ದೈಹಿಕ ಶಿಕ್ಷಣ ನಿರ್ದೇಶಕರು ಸೇರಿದಂತೆ ಇತರರು ಇದ್ದರು.

► Follow us on –  Facebook / Twitter  / Google+

Facebook Comments

Sri Raghav

Admin