‘ಪಿತೃಪಕ್ಷ’ದ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು ಇಲ್ಲಿವೆ ನೋಡಿ

ಈ ಸುದ್ದಿಯನ್ನು ಶೇರ್ ಮಾಡಿ

pitru-paksha

ಬೆಂಗಳೂರು, ಸೆ.29- ಪಿತೃ ಋಣವು ಮನುಷ್ಯ ತೀರಿಸಲೇಬೇಕಾದ ಬಹುಮುಖ್ಯ ಋಣಗಳಲ್ಲೊಂದು. ಏಕೆಂದರೆ, ನಮಗೆ ಈ ದೇಹ ದೊರೆತಿರುವುದೇ ಪಿತೃಗಳಿಂದ. ಅವರು ಸಂತೃಪ್ತರಾಗಿ ಆಶೀರ್ವಾದ ಮಾಡಿದರೆ ಅದಕ್ಕಿಂತ ಹೆಚ್ಚಿನ ಬಲ ಇನ್ನೊಂದಿಲ್ಲ. ಹೀಗಾಗಿ ಪಿತೃ ಕಾರ್ಯಕ್ಕೆ ಅರ್ಹರಾದವರು ಅದನ್ನು ಮಾಡಲೇಬೇಕು ಮತ್ತು ಕಿರಿಯರು ಇದರ ಪ್ರಸಾದ, ಮಂತ್ರಾಕ್ಷತೆ ಪಡೆಯಬೇಕು. ಭಾದ್ರಪದ ಮಾಸದ ಕೃಷ್ಣಪಕ್ಷಕ್ಕೆ ಪಿತೃಪಕ್ಷ ಎನ್ನುತ್ತಾರೆ. ಈ ಪಕ್ಷಕ್ಕೆ ಮಹಾಲಯ ಪಕ್ಷ, ಮಹಾಲಯ ಅಮವಾಸ್ಯೆ, ಅಪರ ಪಕ್ಷವೆಂದು ಕರೆಯುತ್ತಾರೆ. ಪಿತೃಪಕ್ಷವು ಹಿಂದೂ ಚಾಂದ್ರಮಾನ ತಿಂಗಳಾದ ಭಾದ್ರಪದ ಕೃಷ್ಣ ಪಕ್ಷದ ಪಾಡ್ಯದಿಂದ ಅಮಾವಾಸ್ಯೆವರೆಗೆ ಬರುತ್ತದೆ. ಒಬ್ಬರ ಮೂರು ತಲೆಮಾರುವರೆಗಿನ ಹಿರಿಯರು/ಪೂರ್ವಜರು/ಪಿತೃಗಳ ಆತ್ಮವು ಪಿತೃಲೋಕದಲ್ಲಿ ಅಂದರೆ ಭೂಮಿ ಮತ್ತು ಸ್ವರ್ಗದ ನಡುವಿನ ಪ್ರದೇಶದಲ್ಲಿ ವಾಸ ಮಾಡಿಕೊಂಡಿರುತ್ತಾರೆ. ಭೂಮಿಯಲ್ಲಿ ಮರಣ ಹೊಂದಿರುವವರ ಆತ್ಮವನ್ನು ಯಮಲೋಕಕ್ಕೆ ರಮಾಡಿಕೊಳ್ಳುವಾಗ ಅಲ್ಲಿ ಈ ಆತ್ಮದ ಪೂರ್ವಜರ ಪೈಕಿ ಮೊದಲಿನವರ ಆತ್ಮವನ್ನು ಸ್ವರ್ಗಕ್ಕೆ ಕಳುಹಿಸುತ್ತಾನೆ ಎಂಬ ಪ್ರತೀತಿ ಇದೆ.

ಆದ್ದರಿಂದ ಈ ಪಿತೃಲೋಕದಲ್ಲಿ ಮೂರು ತಲೆಮಾರಿನ ಆತ್ಮಗಳು ಮಾತ್ರ ಇರುತ್ತವೆ. ಶ್ರಾದ್ಧ ಮಾಡುವಾಗ ಈ ಲೋಕದಲ್ಲಿರುವ ಮೂರು ತಲೆಮಾರಿನ ಪೂರ್ವಜರಿಗೆ ಮಾತ್ರ ಪಿಂಡ ಪ್ರದಾನ ಮತ್ತು ತರ್ಪಣ ಕೊಡುವ ಸಂಪ್ರದಾಯವಿದೆ. ಪಿತೃಪಕ್ಷದ ಪ್ರಾರಂಭದಲ್ಲಿ ಸೂರ್ಯನು ಕನ್ಯಾರಾಶಿ ಪ್ರವೇಶಿಸುವಲ್ಲಿಂದ ನಂತರದ ರಾಶಿಗೆ ಹೋಗುವವರೆಗಿನ ಸಮಯದಲ್ಲಿ ಪಿತೃಗಳ ಆತ್ಮವು ಭೂಮಿಯಲ್ಲಿರುವ ತಮ್ಮ ವಂಶಜರ ಮನೆಗಳಿಗೆ ಬಂದು ವಾಸಿಸುತ್ತವೆ ಎಂಬ ನಂಬಿಕೆ ಇದೆ.  ಮಹಾಭಾರತದ ನಾಯಕರಲ್ಲಿ ಒಬ್ಬನಾದ ಕರ್ಣನನ್ನು ದೇವದೂತರು ಸ್ವರ್ಗಕ್ಕೆ ಕರೆದೊಯ್ಯುವಾಗ ಮಾರ್ಗಮಧ್ಯೆ ಅವರಿಗೆ ತಿನ್ನಲು ಏನೂ ಸಿಗುವುದಿಲ್ಲ. ಎಲ್ಲೆಲ್ಲಿ ನೋಡಿದರೂ ಬೆಳ್ಳಿ, ಬಂಗಾರ, ವಜ್ರ, ವೈಢೂರ್ಯಗಳು ಮಾತ್ರ ಕಾಣಸಿಗುತ್ತವೆ. ಜೀವಿತಾವಯಲ್ಲಿ ಬೆಳ್ಳಿ, ಬಂಗಾರ, ವಜ್ರ, ವೈಢೂರ್ಯ ದಾನ ಮಾಡಿದರೂ ಪೂರ್ವಜರಿಗೆ ಶ್ರಾದ್ಧ ಮಾಡಿ ಆಹಾರ ಕೊಡದ ಕಾರಣ ಈ ಅವಸ್ಥೆ ಎಂಬುದು ಅರಿವಾಯಿತು.

ಈ ಲೋಪ ಸರಿಪಡಿಸಲು ಅಂದರೆ ಪೂರ್ವಜರನ್ನು ಆರಾಸಿ ಅವರಿಗೆ ಶ್ರಾದ್ಧ, ಊಟ, ತಿಂಡಿ, ನೀರನ್ನು ಕೊಡುವುದು ವಾಡಿಕೆಯಾಗಿ ಬಂದಿದೆ. ಪಿತೃ ಋಣವನ್ನು ಮನುಷ್ಯ ಈ ರೂಪದಲ್ಲಿ ಈ ಪಕ್ಷದಲ್ಲಿ ತೀರಿಸುತ್ತ ಬರುತ್ತಿದ್ದಾನೆ.

► Follow us on –  Facebook / Twitter  / Google+

Facebook Comments

Sri Raghav

Admin