ಪಿಯುಸಿ ಅಕೌಂಟೆನ್ಸಿ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣ, ಮೂವರು ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

PUC--Question-Paper--Raichu

ಬೆಂಗಳೂರು, ಮಾ. 13 : ರಾಯಚೂರಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಕಾಮರ್ಸ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಮಾನ್ವಿ ಪೊಲೀಸ್ ಠಾಣೆಯಲ್ಲಿ ಮೂವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.  ರಾಯಚೂರಿನ ಕಳಿಂಗ ಕಾಲೇಜಿನ ಪ್ರಿನ್ಸಿಪಾಲ್ ಮಹೇಶ್, ಉಪನ್ಯಾಸಕ ಶರಣಬಸವ ಹಾಗೂ ಕಲ್ಮಠ ಕಾಲೇಜಿ ಉಪನ್ಯಾಸಕ ಸಿದ್ಧನಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇಂದು ಬೆಳಿಗ್ಗೆ ಕಾಮರ್ಸ್ ವಿಷಯಕ್ಕೆ ಸೇರಿದ ಅಕೌಂಟೆನ್ಸಿ ಪ್ರಶ್ನೆ ಪತ್ರಿಕೆ ರಾಯಚೂರು ವಿದ್ಯಾರ್ಥಿಗಳ ವಾಟ್ಸಾಪ್ ನಲ್ಲಿ ಹರಿದಾಡಿತ್ತು.

ಬೆಳಿಗ್ಗೆ 12 ಗಂಟೆ 30 ನಿಮಿಷಕ್ಕೆ ರಾಯಚೂರು ಜಿಲ್ಲಾಧಿಕಾರಿ ಗಮನಕ್ಕೆ ಬಂದಿದೆ. ಅಂದರೆ 10:30 ಕ್ಕೆ ಪರೀಕ್ಷೆ ಆರಂಭವಾದ 2 ಗಂಟೆಗಳ ನಂತರ ಈ ಸುದ್ದಿ ಹೊರಬಿದ್ದಿದೆ.  ರಾಯಚೂರು ಎಸ್ಪಿ ಚೇತನ್ ಸಿಂಗ್ ರಾಥೋಡ್ ಈ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನಲಾದ ಪ್ರಕರಣದ ತನಿಖೆ ನಡೆಸುತ್ತಿದ್ದರು. ಇದೀಗ ತನಿಖೆಯ ನಂತರ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ. ‘ವಾಟ್ಸಾಪ್ ನಲ್ಲಿ ಜಿಲ್ಲಾಧಿಕಾರಿಗೆ ಸಂದೇಶ ಬಂದಿದೆ ಅಷ್ಟೆ. ಈ ಬಗ್ಗೆ ಈಗಾಗಲೇ ತನಿಖೆಗೆ ಆದೇಶ ನೀಡಲಾಗಿದೆ. ಯಾವುದೇ ಕಾರಣಕ್ಕೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ,’ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರದ ಅಧೀಕ್ಷಕ ವಿಜಯ್ ಕುಮಾರ್ ರನ್ನು ಸಸ್ಪೆಂಡ್ ಮಾಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin