ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಕಚೇರಿಗಳ ಮೇಲೆ ಇಡಿ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

Karti--02
ನವದೆಹಲಿ/ಚೆನ್ನೈ, ಜ.13-ಏರ್‍ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಹಣ ದುರ್ಬಳಕೆ ತನಿಖೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ ದೆಹಲಿ ಮತ್ತು ಚೆನ್ನೈನ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ಇಂದು ದಾಳಿ ನಡೆಸಿದರು. ಇಂದು ಮುಂಜಾನೆಯಿಂದ ಈ ದಾಳಿ ನಡೆದಿದ್ದು, ಕೆಲವು ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕಳೆದ ವರ್ಷ ಡಿಸೆಂಬರ್ 1ರಂದು ಸಹ ಕೇಂದ್ರೀಯ ತನಿಖಾ ತಂಡ ವಿವಿಧೆಡೆ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ತಿ ಸಂಬಂಧಿಕರು ಮತ್ತು ಇತರರ ಮನೆಗಳು ಮತ್ತು ಕಚೇರಿಗಳ ಮೇಲೆ ಇದೇ ರೀತಿಯ ದಾಳಿಗಳನ್ನು ನಡೆಸಿತ್ತು.

Facebook Comments

Sri Raghav

Admin