ಪುಟ್ಟಣ್ಣಯ್ಯ ಸಾವಿನ ದುಃಖ ತಾಳಲಾರದೆ ಅಭಿಮಾನಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Puttannayya

ಪಾಂಡವಪುರ, ಫೆ.22- ರೈತ ಸಂಘದ ಮುಖಂಡ ಹಾಗೂ ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಅವರ ಸಾವಿನ ದುಃಖವನ್ನು ತಾಳಲಾರದೆ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದಿದೆ. ಚಂದ್ರು (27) ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ. ಪುಟ್ಟಣ್ಣಯ್ಯ ಅವರ ಅಪ್ಪಟ ಶಿಷ್ಯನಾಗಿದ್ದ ಚಂದು ಪ್ರತಿ ನಿತ್ಯ ಪುಟ್ಟಣ್ಣಯ್ಯ ಅವರೊಂದಿಗೆ ಸಂಪರ್ಕದಲ್ಲಿರುತ್ತಿದ್ದ. ಅಲ್ಲದೆ ಪಗಡೆ ಆಟ ಆಡುವ ಮೂಲಕ ಪುಟ್ಟಣ್ಣಯ್ಯ ಅವರಿಗೆ ಖುಷಿ ಪಡಿಸುತ್ತಿದ್ದ ಎನ್ನಲಾಗಿದೆ. ಇವರ ಸಾವಿನ ದುಃಖವನ್ನು ತಮ್ಮ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin