ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟಿನಿಂದ ತಡೆಯಾಜ್ಞೆ

ಈ ಸುದ್ದಿಯನ್ನು ಶೇರ್ ಮಾಡಿ

pura--sabhe

ಬಾಗೇಪಲ್ಲಿ, ಸೆ.16- ಪಟ್ಟಣದ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯ ಮೀಸಲಾತಿ ಬದಲಾವಣೆ ಬಗ್ಗೆ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ವಕೀಲ ರವಿ ಪ್ರಶ್ನೆ ಮಾಡಿದ ಹಿನ್ನೆಲೆಯಲ್ಲಿ, ಚುನಾವಣೆಗೆ ತಡೆಯಾಜ್ಞೆ  ಜಾರಿಯಾಗಿದೆ.ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಅನೇಕ ರಾಜಕೀಯ ತಿರುವು ಮರುವುಗಳಿಂದ ಹೊಸ ಹೊಸ ಪಟ್ಟುಗಳು, ಹಾವು ಏಣಿ ಆಟದಂತಹ ಬದಲಾವಣೆಗಳು ನಡೆಯುತ್ತಿದ್ದವು. ವಕೀಲ ರವಿ ಎಸ್.ಸಿ. ಮೀಸಲಾತಿ ಇದುವರೆವಿಗೂ ಬಂದಿಲ್ಲ ಎಂದು ನ್ಯಾಯಾಲಯದಲ್ಲಿ ಬಹು ದಿನಗಳ ಹಿಂದೆ ಪ್ರಶ್ನೆ ಮಾಡಿದ್ದರು. ಇಂದು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ತಡೆಯಾಜ್ಞೆ ಆದ್ದರಿಂದ ಚುನಾವಣೆ ಮುಂದೂಡಲ್ಪಟ್ಟಿದೆ.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin