ಪೂಂಚ್ ಜಿಲ್ಲೆಯ ಗಡಿಯಲ್ಲಿ ಪಾಕ್ ಅಪ್ರಚೋದಿತ ದಾಳಿ : ಬಿಎಸ್ಎಫ್ ಯೋಧ ಹುತಾತ್ಮ
ಜಮ್ಮು, ನ.6- ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಬಳಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಅಪ್ರಚೋದಿತ ದಾಳಿ ಮುಂದುವರೆಸಿದೆ. ಪಾಕಿಸ್ತಾನಿ ಪಡೆಗಳು ಇಂದು ಮುಂಜಾನೆ ನಡೆಸಿದ ದಾಳಿಯಲ್ಲಿ ಬಿಎಸ್ಎಫ್ ಯೋಧನೊಬ್ಬ ಹುತಾತ್ಮನಾಗಿದ್ಧಾನೆ. ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಐದು ಸೇನಾ ಮುಂಚೂಣಿ ನೆಲೆಗಳ ಮೇಲೆ ಪಾಕಿಸ್ತಾನಿ ರೇಂಜರ್ಗಳು ಸಣ್ಣ ಶಸ್ತ್ರಾಸ್ತ್ರಗಳು, ಸ್ವಯಂಚಾಲಿತ ಬಂದೂಕುಗಳು ಮತ್ತು 82 ಎಂಎಂ ಮಾರ್ಟರ್ಗಳಿಂದ ದಾಳಿಗಳನ್ನು ನಡೆಸಿದರು ಎಂದು ಬಿಎಸ್ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತೀಯ ಯೋಧರು ಮತ್ತು ಪಾಕ್ ಸೇನೆ ನಡುವೆ ಕೆಲಕಾಲ ಗುಂಡಿನ ಚಕಮಕಿ ನಡೆಯಿತು. ಎನ್ಕೌಂಟರ್ನಲ್ಲಿ ಬಿಎಸ್ಎಫ್ ಯೋಧ ಹುತಾತ್ಮನಾಗಿದ್ದಾನೆ.
ಕಾಶ್ಮೀರ ಕಣಿವೆಯ ಗಡಿ ನಿಯಂತ್ರಣ ರೇಖೆ ಬಳಿ ಕಳೆದ ಕೆಲವು ದಿನಗಳಿಂದ ಪಾಕ್ ಯೋಧರು ಭಾರೀ ಪ್ರಮಾಣದಲ್ಲಿ ಅಪ್ರಚೋದಿತ ದಾಳಿ ನಡೆಸುತ್ತಿದ್ದಾರೆ. ಭಾರತೀಯ ಯೋಧರು ಪಾಕ್ ರೇಂಜರ್ಗಳಿಗೆ ದಿಟ್ಟ ಉತ್ತರ ನೀಡುತ್ತಿದ್ದಾರೆ. ಭಾರತೀಯ ಕಮ್ಯಾಂಡೋಗಳ ಸರ್ಜಿಕಲ್ ಸ್ಟ್ರೈಕ್ ನಂತರ ಪಾಕಿಸ್ತಾನ ಈವರೆಗೆ 70ಕ್ಕಿಂತಲೂ ಹೆಚ್ಚು ಬಾರಿ ಕದನವಿರಾಮ ಉಲ್ಲಂಘಿಸಿದೆ.
► Follow us on – Facebook / Twitter / Google+