ಪೇಜಾವರ ಶ್ರೀಗಳ ಕಟೌಟ್ ಹರಿದು ವಿದ್ಯಾರ್ಥಿಗಳ ಆಕ್ರೋಶ

ಈ ಸುದ್ದಿಯನ್ನು ಶೇರ್ ಮಾಡಿ

Pejavara-shree--02

ಬೆಂಗಳೂರು, ನ.30- ಉಡುಪಿಯಲ್ಲಿ ನಡೆದ ಧರ್ಮ ಸಂಸತ್ ಸಭೆಯಲ್ಲಿ ಸಂವಿಧಾನ ತಿದ್ದುಪಡಿ ಕುರಿತಂತೆ ಮಾತನಾಡಿದ ಪೇಜಾವರ ಶ್ರೀಗಳ ವರ್ತನೆ ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಜ್ಞಾನಭಾರತಿ ಆವರಣದಲ್ಲಿ ಅಳವಡಿಸಲಾಗಿದ್ದ ಪೇಜಾವರ ಶ್ರೀಗಳ ಬ್ಯಾನರ್, ಕಟೌಟ್‍ಗಳನ್ನು ತೆರವುಗೊಳಿಸಿ ವಿದ್ಯಾರ್ಥಿಗಳು ತಮ್ಮ ಕೋಪ ತೀರಿಸಿಕೊಂಡರು.

ಬಿಬಿಎಂಪಿ ಮಾಜಿ ಸದಸ್ಯ ಹನುಮಂತೇಗೌಡ ಅವರು ಹನುಮ ಜಯಂತಿ ದಿನದಂದು ಪೇಜಾವರ ಶ್ರೀಗಳಿಗೆ ಗುರು ವಂದನೆ ಸಲ್ಲಿಸಲು ತೀರ್ಮಾನಿಸಿ ಕಾರ್ಯಕ್ರಮ ಕುರಿತಂತೆ ಜ್ಞಾನಭಾರತಿ ಆವರಣದ ರಸ್ತೆಗಳಲ್ಲಿ ಬ್ಯಾನರ್ ಮತ್ತು ಕಟೌಟ್ ಹಾಕಿಸಿದ್ದರು. ಇಂದು ಮುಂಜಾನೆ ಗುಂಪು ಸೇರಿದ ವಿಶ್ವವಿದ್ಯಾಲಯದ ಸಂಶೋಧನಾ ಮತ್ತಿತರ ವಿಭಾಗದ ನೂರಾರು ವಿದ್ಯಾರ್ಥಿಗಳು ಹನುಮಂತೇಗೌಡರ ಧೋರಣೆ ಬಗ್ಗೆ ಕಿಡಿಕಾರಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿರುವ ಸಂವಿಧಾನ ತಿದ್ದುಪಡಿ ಬಗ್ಗೆ ಮಾತನಾಡಿರುವ ಪೇಜಾವರ ಶ್ರೀಗಳು ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಿದ್ದಾರೆ. ಅಂತಹ ವ್ಯಕ್ತಿಯ ಭಾವಚಿತ್ರವನ್ನು ವಿವಿ ಆವರಣದಲ್ಲಿ ಅಳವಡಿಸುವುದನ್ನು ನಾವು ಸಹಿಸುವುದಿಲ್ಲ. ಹೀಗಾಗಿ ಪೇಜಾವರ ಶ್ರೀಗಳ ಎಲ್ಲಾ ಭಾವಚಿತ್ರಗಳನ್ನು ತೆರವುಗೊಳಿಸುತ್ತಿದ್ದೇವೆ ಎಂದು ವಿದ್ಯಾರ್ಥಿಗಳು ತಿಳಿಸಿದರು.

Facebook Comments

Sri Raghav

Admin