ಪೊಲೀಸಪ್ಪನನ್ನೇ ದೋಚಿದ ಕಳ್ಳರು..!

ಈ ಸುದ್ದಿಯನ್ನು ಶೇರ್ ಮಾಡಿ

Police-Robber--01

ಚಿತ್ರದುರ್ಗ, ಆ.17- ಪೊಲೀಸ್ ಮುಖ್ಯಪೇದೆಯೊಬ್ಬರನ್ನು ಅಡ್ಡಗಟ್ಟಿದ ಕಳ್ಳರು ಅವರ ಮೇಲೆ ಹಲ್ಲೆ ನಡೆಸಿ ಹಣ-ಆಭರಣ ಹಾಗೂ ಮೊಬೈಲ್‍ ಅನ್ನು ಲಪಟಾಯಿಸಿರುವ ಘಟನೆ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಹಿರಿಯೂರು ತಾಲೂಕಿನ ಐಮಂಗಲ ಪೊಲೀಸ್ ಠಾಣೆ ಮುಖ್ಯಪೇದೆ ಪ್ರಕಾಶ್ ದರೋಡೆಗೊಳಗಾದವರು.

ಚಿತ್ರದುರ್ಗದ ಬಸ್ ನಿಲ್ದಾಣದಲ್ಲಿ ತಮ್ಮ ದ್ವಿಚಕ್ರ ವಾಹನ ತರಲು ಪ್ರಕಾಶ್ ಅವರು ಹೋದಾಗ ಕಾದು ಕುಳಿತಿದ್ದ ಚೋರರು ಇವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ 11 ಸಾವಿರ ಹಣ, ಚಿನ್ನದ ಸರ ಹಾಗೂ ಮೊಬೈಲ್ ಕಸಿದುಕೊಂಡು ಇವರನ್ನು ತಳ್ಳಿ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಪ್ರಕಾಶ್ ಅವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರ ಠಾಣೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಚೋರರಿಗಾಗಿ ಬಲೆ ಬೀಸಿದ್ದಾರೆ.

Facebook Comments

Sri Raghav

Admin