ಪೊಲೀಸರ ಕ್ರಮ ಖಂಡಿಸಿ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

pandavapura6
ಪಾಂಡವಪುರ, ಸೆ.12- ಕೆಆರ್‍ಎಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಲಾಠಿ ಪ್ರಹಾರ ನಡೆಸಿದ ಪೊಲೀಸರ ಕ್ರಮ ಖಂಡಿಸಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ಡಾ.ರಾಜ್‍ಕುಮಾರ್ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪ್ರತಿಕೃತಿ ದಹಿಸಿದರಲ್ಲದೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಾಚ್ಯ ಪದಗಳಿಂದ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಸುಮಾರು 30 ನಿಮಿಷಕ್ಕೂ ಹೆಚ್ಚು ಕಾಲ ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು ಅನಂತರ ಸಿಎಂ ಸಿದ್ದರಾಮಯ್ಯನವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಎಚ್.ಎನ್.ಮಂಜುನಾಥ್, ಎಂ.ಚಿಕ್ಕಣ್ಣ, ನೀಲನಹಳ್ಳಿ ಧನಂಜಯ, ಹಿರೇಮರಳಿ ಈರೇಗೌಡ, ಷಣ್ಮಖ, ಚಿಕ್ಕಮರಳಿ ನವೀನ್‍ಕುಮಾರ್. ಶ್ರೀನಿವಾಸ್‍ನಾಯಕ್ ಇತರರು ಇದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin