ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದವರ ಮೇಲೆ ಫೈರಿಂಗ್, ಇಬ್ಬರು ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

Firing--Davanagere--01

ದಾವಣಗೆರೆ,ಜ.24-ವ್ಯಾಪಾರಿಗೆ ಇರಿದು ಪರಾರಿಯಾಗಿದ್ದ ಆರೋಪಿಗಳ ಬಂಧನಕ್ಕೆ ಮುಂದಾದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಗಳಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ವಿದ್ಯಾನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಈ ವೇಳೆ ಪಿಎಸ್‍ಐ ಹಾಗೂ ಕಾನ್‍ಸ್ಟೇಬಲ್ ಗಾಯಗೊಂಡಿದ್ದಾರೆ.  ವಿದ್ಯಾನಗರ ಠಾಣೆಯ ಪಿಎಸ್‍ಐ ಸಿದ್ದೇಶ್ , ಬಡಾವಣೆ ಠಾಣೆ ಕಾನ್‍ಸ್ಟೇಬಲ್ ಚಂದ್ರಪ್ಪ ಗಾಯಗೊಂಡವರು.

ತರಕಾರಿ ವ್ಯಾಪಾರಿಯ ಮೇಲೆ ನಾಲ್ಕೈದು ಜನರ ಗುಂಪು ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಈ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ದೃಶ್ಯಾವಳಿಯನ್ನು ಆಧರಿಸಿ ಪೊಲೀಸರು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದರು. ಆರೋಪಿಗಳು ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ತಿರುಗಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ವಿದ್ಯಾನಗರ ಠಾಣೆಯ ಪಿಎಸ್‍ಐ ಸಿದ್ದೇಶ್ ಬಡಾವಣೆ ಠಾಣೆಯ ಕಾನ್‍ಸ್ಟೇಬಲ್ ಚಂದ್ರಪ್ಪ ಬಂಧಿಸಲು ಮುಂದಾಗಿದ್ದಾರೆ.

ಈ ವೇಳೆ ರೌಡಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದು, ತಮ್ಮ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಈ ಸಂದರ್ಭದಲ್ಲಿ ಸತೀಶನ ಕಾಲಿಗೆ ಎರಡು ಗುಂಡುಗಳು ಮತ್ತು ಸುನಿಲ್ ಕಾಲಿಗೆ ಒಂದು ಗುಂಡು ತಗುಲಿದ್ದು, ಜಿಲ್ಲಾಸ್ಪತ್ರೆಯಲ್ಲಿ ಇಬ್ಬರನ್ನೂ ದಾಖಲು ಮಾಡಲಾಗಿದೆ.
ವಿದ್ಯಾನಗರದ ಪಿಎಸ್‍ಐ ಸಿದ್ದೇಶ್ ಅವರ ಎಡಗೈಗೆ ಚಂದ್ರಪ್ಪ ಅವರ ಬಲೈಗೆ ಗಾಯಗಳಾಗಿವೆ. ಇಬ್ಬರೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ವಿಷಯ ತಿಳಿದು ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳ್ಳೇದ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಉದ್ದೇಶ್, ಡಿವೈಎಸ್ಪಿ ಎಂ.ಬಾಬು, ಸಿಪಿಐ ಆನಂದ್, ಎಸ್‍ಐ ಶಿಲ್ಪ ಸೇರಿದಂತೆ ಅಧಿಕಾರಿಗಳ ತಂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin