ಪೊಲೀಸ್ ಅಧಿಕಾರಿಯನ್ನು ಗುಂಡಿಟ್ಟು ಕೊಂದ ಶಂಕಿತ ನಕ್ಸಲರು
ಈ ಸುದ್ದಿಯನ್ನು ಶೇರ್ ಮಾಡಿ

ಗಯಾ (ಬಿಹಾರ), ಅ.02-ಶಂಕಿತ ನಕ್ಸಲರು ಓರ್ವ ಪೊಲೀಸ್ ಅಧಿಕಾರಿಯನ್ನು ಗುಂಡಿಟ್ಟು ಕೊಂದಿರುವ ಘಟನೆ ನಕ್ಸಲ್ ಪೀಡಿತ ಗಯಾ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಮೋಟಾರ್ ಸೈಕಲ್ಗಳಲ್ಲಿ ಬಂದ ಮೂವರು ನಕ್ಸಲರು ಕೊಟ್ಚಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಖ್ವಾಮ್ ಅನ್ಸಾರಿ ಅವರ ಮೇಲೆ ಗುಂಡು ಹಾರಿಸಿ ಸ್ಥಳದಲ್ಲೇ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಮಹಾ ನಿರೀಕ್ಷಕ ಸೌರಬ್ ಕುಮಾರ್ ಹೇಳಿದ್ದಾರೆ. ಪೊಲೀಸ್ ಅಧಿಕಾರಿ ಬೆಳಿಗ್ಗೆ ವಾಯು ವಿಹಾರದಲ್ಲಿದ್ದಾಗ ಅವರ ಮೇಲೆ ನಕ್ಸಲರು ದಾಳಿ ನಡೆಸಿ ಹತ್ಯೆ ಮಾಡಿದರು ಎಂದು ಡಿಐಜಿ ತಿಳಿಸಿದ್ದಾರೆ.
► Follow us on – Facebook / Twitter / Google+
Facebook Comments