ಪೊಲೀಸ್ ಚೌಕಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು

ಈ ಸುದ್ದಿಯನ್ನು ಶೇರ್ ಮಾಡಿ
Police
ಸಾಂಧರ್ಭಿಕ ಚಿತ್ರ

ಬೆಂಗಳೂರು, ನ.3– ಪೊಲೀಸ್ ಚೌಕಿಯೊಳಗೆ ಟಯರ್ ಇಟ್ಟು ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಕಬ್ಬನ್ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಬ್ಬನ್ಪಾರ್ಕ್ ಸಂಚಾರಿ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದ ಕಬ್ಬನ್ ರಸ್ತೆಯ ಬಿಆರ್ವಿ ಮೈದಾನ ಬಳಿಯ ಪೊಲೀಸ್ ಚೌಕಿಯೊಳಗೆ ಟಯರ್ ಇಟ್ಟು ದುಷ್ಕರ್ಮಿಗಳು ಬೆಳಗಿನ ಜಾವ ಬೆಂಕಿ ಹಚ್ಚಿದ್ದಾರೆ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Facebook Comments

Sri Raghav

Admin