ಪೊಲೀಸ್ ಬಂದೋಬಸ್ತ್’ನಲ್ಲಿ ಕೋಟ್ಯಂತರ ರೂ. ಬೆಲೆಯ ಭೂಮಿ ಸರ್ಕಾರದ ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Bengaluru-Land--01

ಬೆಂಗಳೂರು, ಮಾ.8-ಬೆಂಗಳೂರು ದಕ್ಷಿಣ ತಾಲೂಕು ಬೇಗೂರು ಹೋಬಳಿ ಹೊಂಗಸಂದ್ರದಲ್ಲಿ ಕೋಟ್ಯಂತರ ರೂ. ಬೆಲೆಬಾಳುವ ಸರ್ಕಾರಿ ಭೂಮಿಯನ್ನು ಜಿಲ್ಲಾಡಳಿತ ಇಂದು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಿತು. ಹೊಂಗಸಂದ್ರದ ಸರ್ವೆ ನಂ.43 ಮತ್ತು 44 ರಲ್ಲಿ ಖಾಸಗಿವ್ಯಕ್ತಿಗಳು ಅತಿಕ್ರಮಣ ಮಾಡಿದ್ದ ಕೋಟ್ಯಂತರ ರೂ. ಬೆಲೆಯ ಭೂಮಿಯನ್ನು ಜಿಲ್ಲಾಧಿಕಾರಿ ವಿ.ಶಂಕರ್ ಆದೇಶದ ಮೇರೆಗೆ ಜಿಲ್ಲಾಡಳಿತ ವಶಕ್ಕೆ ಪಡೆಯಿತು.  ತಹಶೀಲ್ದಾರ್ ಶಿವಕುಮಾರ್ ಇಂದು ಬೆಳ್ಳಂಬೆಳಗ್ಗೆ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಜೆಸಿಬಿ ಯಂತ್ರದ ಮೂಲಕ ಅಕ್ರಮವಾಗಿ ಅತಿಕ್ರಮಿಸಿದ್ದ ಭೂಮಿಯನ್ನು ತೆರವುಗೊಳಿಸಿದರು.

ಲೋಕಾಯುಕ್ತರ ಆದೇಶದ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದ್ದು, ಸರ್ಕಾರದ ವಶಕ್ಕೆ ಪಡೆದ ಭೂಮಿಗೆ ಇದು ಪಾಲಿಕೆಗೆ ಸೇರಿದ ಸ್ವತ್ತು ಎಂಬ ನಾಮಫಲಕ ಅಳವಡಿಸಲಾಯಿತು.
ಭೂಮಿ ತೆರವುಗೊಳಿಸುವ ವೇಳೆ ಕೆಲವರು ತೀವ್ರ ವಿರೋಧ ವ್ಯಕ್ತಪಡಿಸಿದರು.  ಆದರೆ ತಹಶೀಲ್ದಾರ್ ಶಿವಕುಮಾರ್ ಪೊಲೀಸರ ನೆರವಿನಲ್ಲಿ ಯಾವುದೇ ಮುಲಾಜಿಲ್ಲದೆ ಅಕ್ರಮ ಭೂಮಿಯನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆದುಕೊಂಡರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin