ಪೌರಕಾರ್ಮಿಕರು ಮ್ಯಾನ್‍ವೋಲ್‍ಗೆ ಇಳಿದ ಪ್ರಕರಣ : ಗ್ರಾಪಂ ಅಧ್ಯಕ್ಷೆ ಹಾಗೂ ಪಿಡಿಒ ವಿರುದ್ಧ ಎಫ್‍ಐಆರ್

ಈ ಸುದ್ದಿಯನ್ನು ಶೇರ್ ಮಾಡಿ

Mysuru--001

ಮೈಸೂರು, ಜೂ.8- ಮ್ಯಾನ್‍ಹೋಲ್‍ಗೆ ಪೌರಕಾರ್ಮಿಕರನ್ನು ಸ್ವಚ್ಛತೆಗೆ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಪಂ ಅಧ್ಯಕ್ಷೆ ಹಾಗೂ ಪಿಡಿಒ ವಿರುದ್ಧ ಕೆ.ಆರ್.ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಚಾಮುಂಡಿಬೆಟ್ಟದ ಗ್ರಾಪಂ ವ್ಯಾಪ್ತಿಯ ತಾವರೆಕೆರೆ ಗ್ರಾಮದ ಗ್ರಾಪಂ ಅಧ್ಯಕ್ಷೆ ಗೀತಾ ಅವರ ಮನೆಯ ಮುಂಭಾಗದಲ್ಲಿ ತುಂಬಿ ಹರಿಯುತ್ತಿದ್ದ ಮ್ಯಾನ್‍ಹೋಲ್‍ನ್ನು ಸ್ವಚ್ಛಗೊಳಿಸುವಂತೆ ಪೌರಕಾರ್ಮಿಕ ಗಣೇಶ್‍ಗೆ ಪಿಡಿಒ ಆನಂದ್ ತಿಳಿಸಿದ್ದಾರೆ.



ಅಧ್ಯಕ್ಷೆ ಗೀತಾ ಹೇಳಿದಂತೆ ಸ್ವಚ್ಛತೆ ಕಾರ್ಯ ನಡೆಸಿದೆ ಇದ್ದರೆ ಕೆಲಸದಿಂದ ತೆಗೆದು ಹಾಕುವುದಾಗಿ ಆನಂದ್ ಬೆದರಿಕೆ ಹಾಕಿದ್ದರಿಂದ ಮ್ಯಾನ್‍ಹೋಲ್‍ನಲ್ಲಿ ಇಳಿದು ಸ್ವಚ್ಛ ಕಾರ್ಯ ಮಾಡಿದ್ದಾರೆಂದು ತಿಳಿದು ಬಂದಿದೆ.  ಸ್ವಚ್ಛ ಕಾರ್ಯ ಮಾಡುವುದನ್ನು ವ್ಯಕ್ತಿಯೊಬ್ಬರು ಮೊಬೈಲ್‍ನಲ್ಲಿ ಚಿತ್ರೀಕರಿಸಿ ಮಾದ್ಯಮದಲ್ಲಿ ಪ್ರಸಾರವಾದ ಹಿನ್ನೆಲೆಯಲ್ಲಿ ಗ್ರಾಪಂ ಅಧ್ಯಕ್ಷೆ ಗೀತಾ ಹಾಗೂ ಪಿಡಿಒ ಆನಂದ್ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಎಪ್‍ಐಆರ್ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin