ಪ್ಯಾಸೆಂಜರ್ ಮತ್ತು ಗೂಡ್ಸ್ ರೈಲು ನಡುವೆ ಡಿಕ್ಕಿ : ಓರ್ವ ಸಾವು, ಹಲವರ ಸ್ಥಿತಿ ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

Train

ಕಟಕ್, ಸೆ.30-ಪ್ರಯಾಣಿಕರ ಟ್ರೈನ್ ಮತ್ತು ಗೂಡ್ಸ್ ರೈಲು ನಡುವೆ ಡಿಕ್ಕಿಯಾಗಿ ಓರ್ವ ಮೃತಪಟ್ಟು, ಹಲವು ಮಂದಿ ತೀವ್ರ ಗಾಯಗೊಂಡ ಘಟನೆ ನಿನ್ನೆ ರಾತ್ರಿ ಓಡಿಶಾಸ ಕಟಕ್ ನಗರದ ಕತಾಜೋಡಿ ರೈಲು ನಿಲ್ದಾಣದಲ್ಲಿ ನಡೆದಿದೆ.  ರೈಲು ನಿಲ್ದಾಣದಿಂದ ಸ್ವಲ್ಪ ದೂರದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಭುವನೇಶ್ವರ್-ಭದಾರ್ಕ್ ಪ್ಯಾಸೆಂಜರ್ ರೈಲು (ಟ್ರೈನ್ ನಂ.78408) ಹಿಂಬದಿಯಿಂದ ಡಿಕ್ಕಿ ಹೊಡೆಯಿತು. ನಿನ್ನೆ ರಾತ್ರಿ ಸುಮಾರು 7 ಗಂಟೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೂರ್ವ ಕರಾವಳಿ ರೈಲ್ವೆ (ಇಸಿಒಆರ್) ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಅನೇಕರು ತೀವ್ರ ಗಾಯಗೊಂಡಿದ್ದಾರೆ. ಜಖಂಗೊಂಡ ಬೋಗಿಗಳ ನಡುವೆ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸುವ ಕಾರ್ಯ ಇಡೀ ರಾತ್ರಿ ನಡೆಯಿತು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ರೈಲು ಅಪಘಾತದಿಂದಾಗಿ ಭುವನೇಶ್ವರ್ ಮತ್ತು ಕಟಕ್ ನಡುವೆ ರೈಲು ಸೇವೆಗಳು ವ್ಯತ್ಯಯಗೊಂಡಿವೆ.

► Follow us on –  Facebook / Twitter  / Google+

Facebook Comments

Sri Raghav

Admin