ಪ್ರಕರಣಗಳನ್ನು ವಿಚಾರಣೆಗೆ ನೀಡುವ ಪರಮೋಚ್ಛ ಅಧಿಕಾರ ಸಿಜೆಐ ಇದೆ : ಸುಪ್ರೀಂ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

S-Supreme-Court

ನವದೆಹಲಿ, ಏ.11-ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು (ಸಿಜೆಐ) ಸಮಾನ ಹಿರಿಯ ನ್ಯಾಯಮೂರ್ತಿಗಳಲ್ಲಿ ಮೊದಲಿಗರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿರುವ ಸುಪ್ರೀಂಕೋರ್ಟ್ ಪ್ರಕರಣಗಳನ್ನು ವಿಚಾರಣೆಗಾಗಿ ಮಂಜೂರು ಮಾಡುವ ಹಾಗೂ ಅವುಗಳ ವಿಚಾರಣೆಗಾಗಿ ನ್ಯಾಯಪೀಠಗಳನ್ನು ಸ್ಥಾಪಿಸುವ ಪರಮೋಚ್ಛ ಅಧಿಕಾರ ಹೊಂದಿರುತ್ತಾರೆ ಎಂದು ಹೇಳಿದೆ. ಪ್ರಕರಣಗಳನ್ನು ವಿಚಾರಣೆಗೆ ಮಂಜೂರು ಮಾಡಲು ಹಾಗೂ ವಿಚಾರಣೆ ಪೀಠ ರಚಿಸಲು ಮಾರ್ಗಸೂಚಿಗಳನ್ನು ರೂಪಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಅರ್ಜಿಯೊಂದರ ವಿಚಾರಣೆಯನ್ನು ತಳ್ಳಿ ಹಾಕಿದ ಸುಪ್ರೀಂಕೋರ್ಟ್ ಮೇಲಿನ ಅಂಶಗಳನ್ನು ಸ್ಪಷ್ಟಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿಗಳಾ ದ ಎ.ಎಂ.ಕಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ ಪೀಠವು ಈ ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರು ನ್ಯಾಯಾಂಗ ವ್ಯವಸ್ಥೆಯ ಸಂವಿಧಾನಿಕ ಕಾರ್ಯನಿರ್ವಹಣೆಯ ಉನ್ನತ ಸ್ಥಾನದಲ್ಲಿರುವುದರಿಂದ ಅವರ ಜವಾಬ್ದಾರಿಯನ್ನು ಪ್ರಶ್ನಿಸುವಂತಿಲ್ಲ ಎಂದು ಪೀಠವು ತಿಳಿಸಿದೆ.  ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು (ಸಿಜೆಐ) ಸಮಾನ ಹಿರಿಯ ನ್ಯಾಯಮೂರ್ತಿಗಳಲ್ಲಿ ಮೊದಲಿಗರಾಗಿರುತ್ತಾರೆ. ಪ್ರಕರಣಗಳನ್ನು ವಿಚಾರಣೆಗಾಗಿ ಮಂಜೂರು ಮಾಡುವ ಹಾಗೂ ಅವುಗಳ ವಿಚಾರಣೆಗಾಗಿ ನ್ಯಾಯಪೀಠಗಳನ್ನು ಸ್ಥಾಪಿಸುವ ಪರಮೋಚ್ಛ ಅಧಿಕಾರ ಹೊಂದಿರುತ್ತಾರೆ ಎಂದು ಪೀಠ ಸ್ಪಷ್ಟವಾಗಿ ಹೇಳಿದೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಕಾರ್ಯನಿರ್ವಹಣೆ ವಿರುದ್ಧ ಹಿರಿಯ ನ್ಯಾಯಾಧೀಶರಾದ ಜೆ.ಚಲಮೇಶ್ವರ್, ರಂಜನ್ ಗೋಗೈ, ಮದನ್ ಬಿ. ಲೋಕೂರ್ ಹಾಗೂ ಕುರಿಯನ್ ಜೋಸೆಫ್ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಈಗ ವಜಾಗೊಂಡಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin