ಪ್ರಜಾಪ್ರಭುತ್ವದ ಕಗ್ಗೊಲೆ : ಲೋಕಸಭೆಯಲ್ಲಿ ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ, ಸಭಾತ್ಯಾಗ

ಈ ಸುದ್ದಿಯನ್ನು ಶೇರ್ ಮಾಡಿ

Mallikarjun-Kharge

ನವದೆಹಲಿ, ಮಾ.14-ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚನೆಗೆ ಯತ್ನಗಳು ನಡೆಯುತ್ತಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್ ಮತ್ತು ಅದರ ಯುಪಿಎ ಮಿತ್ರಪಕ್ಷಗಳು ಇಂದು ಲೋಕಸಭೆಯಲ್ಲಿ ಸಭಾತ್ಯಾಗ ಮಾಡಿದ ಪ್ರಸಂಗ ನಡೆಯಿತು. ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆ ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಷಯ ಪ್ರಸ್ತಾಪಿಸಿ ಗೋವಾದಲ್ಲಿ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿದ್ದರೂ ಸರ್ಕಾರ ರಚಿಸಲು ಆಹ್ವಾನಿಸಿಲ್ಲ. ಬದಲಿಗೆ ಬಿಜೆಪಿಗೆ ಆಹ್ವಾನ ನೀಡಲಾಗಿದೆ. ಮಣಿಪುರದಲ್ಲೂ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಇದು ಪ್ರಜÁಪ್ರಭುತ್ವದ ಕಗ್ಗೊಲೆ ಎಂದು ಆರೋಪಿಸಿದರು. ಕಾಂಗ್ರೆಸ್, ಎನ್‍ಸಿಪಿ ಮತ್ತು ಆರ್‍ಜೆಡಿ ಸದಸ್ಯರು ಖರ್ಗೆ ಹೇಳಿಕೆಯನ್ನು ಬೆಂಬಲಿಸಿದರು.

ಈ ವಿಷಯದ ಬಗ್ಗೆ ಚರ್ಚಿಸಲು ಪ್ರಶ್ನೋತ್ತರ ಕಲಾಪದಲ್ಲಿ ತಾವು ಅವಕಾಶ ನೀಡುವುದಿಲ್ಲ. ಅದಾದ ಬಳಿಕ ಶೂನ್ಯ ವೇಳೆಯಲ್ಲಿ ಇದನ್ನು ಚರ್ಚಿಸಬಹುದಾಗಿದೆ ಎಂದು ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್ ಹೇಳಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಖರ್ಗೆ, ಸದನಲ್ಲಿ ಈ ಗಂಭೀರ ವಿಷಯ ಚರ್ಚಿಸಲು ಅವಕಾಶ ನೀಡದಿದ್ದರೆ ಇನ್ನೆಲ್ಲಿ ಪ್ರಸ್ತಾಪಿಸಬೇಕೆಂದು ಎಂದು ಏರಿದ ಧ್ವನಿಯಲ್ಲಿ ಪ್ರಶ್ನಿಸಿದರು.  ಖರ್ಗೆ ಹೇಳಿಕೆಗೆ ಹಣಕಾಸು ಸಚಿವ ಅರುಣ್ ಜೇಟ್ಲಿ ಆಕ್ಷೇಪ ವ್ಯಕ್ತಪಡಿಸಿದಾಗ ಮಾತಿನ ಚಕಮಕಿ ನಡೆಯಿತು. ಚರ್ಚೆಗೆ ಅವಕಾಶ ನೀಡದ ಕಾರಣ ಕಾಂಗ್ರೆಸ್, ಎನ್‍ಸಿಪಿ ಮತ್ತು ಆರ್‍ಜೆಡಿ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸಭಾತ್ಯಾಗ ಮಾಡಿದರು.

ನಿಲುವಳಿ ಸೂಚನೆಗೆ ನಿರ್ಧಾರ :

ಈ ಎರಡೂ ರಾಜ್ಯಗಳಲ್ಲಿ ಸರ್ಕಾರ ರಚಿಸಲು ಮುಂದಾಗಿರುವ ಬಿಜೆಪಿ ಕ್ರಮದ ವಿರುದ್ಧ ಲೋಕಸಭೆಯಲ್ಲಿ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು ನಿಲುವಳಿ ಸೂಚನೆ ಮಂಡಿಸಲು ನಿರ್ಧರಿಸಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin