ಪ್ರತಿಷ್ಠೆಯ ಕಣವಾಗಿದ್ದ ಕೊರಟಗೆರೆಯಲ್ಲಿ ಪರಮೇಶ್ವರ್ ಗೆ 7619 ಮತಗಳ ಅಂತರದ ಗೆಲುವು

ಈ ಸುದ್ದಿಯನ್ನು ಶೇರ್ ಮಾಡಿ

Parameshwar

ಕೊರಟಗೆರೆ,ಮೇ16- ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಪ್ರತಿಷ್ಠೆಯ ಕಣವಾಗಿದ್ದ ಶತಾಯಗತಾಯ ಗೆಲ್ಲಬೇಕೆಂದು ಪಣತೊಟ್ಟು ಕ್ಷೇತ್ರವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.  2018ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ, ಮಾಜಿ ಶಾಸಕ ಪಿ.ಆರ್. ಸುಧಾಕರಲಾಲ್ ಅವರನ್ನು ಪರಾಭವಗೊಳಿಸಿ 7619 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ವೈ.ಹೆಚ್. ಹುಚ್ಚಯ್ಯ 12,190 ಮತ ಪಡೆದು 3ನೇ ಸ್ಥಾನಕ್ಕೆ ತೃಪ್ತರಾಗಿದ್ದಾರೆ. 2017ಆಗಸ್ಟ್ ನಿಂದ ಸತತ 8 ತಿಂಗಳಿಂದ ಕೊರಟಗೆರೆ ಕೇತ್ರದ ಜನರೊಂದಿಗೆ ಬೆರೆತು ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಡಾ|| ಜಿ.ಪರಮೆಶ್ವರ್ ಕಾಂಗ್ರೆಸ್ ಪಕ್ಷದ 5 ವರ್ಷದ ಅವಧಿಯ ಯೋಜನೆಗಳನ್ನು ಜನರ ಮುಂದಿಟ್ಟು ಚುನಾವಣೆಯಲ್ಲಿ ಜಯಶಾಲಿಯಾಗಿದ್ದಾರೆ.ಕ್ಷೇತ್ರದ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಕಾರಣಕ್ಕೆ ಮತೋಮ್ಮೆ ಡಾ.ಜಿ.ಪರಮೆಶ್ವರ್‍ಗೆ ಮತದಾರರು ಆಶೀರ್ವಾದ ಮಾಡಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಕೊರಟಗೆರೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮದಿಂದ ಬೈಕ್ ರ್ಯಾಲಿ ನಡೆಸಿದರು.

Facebook Comments

Sri Raghav

Admin