ಪ್ರತ್ಯೇಕ ಲಿಂಗಾಯತ ಧರ್ಮ : 14 ರಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ

ಈ ಸುದ್ದಿಯನ್ನು ಶೇರ್ ಮಾಡಿ

Lingayata--011

ಬೆಂಗಳೂರು, ಮಾ.9-ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿಲ್ಲ. ಲಿಂಗಾಯತರು ಮತ್ತು ವೀರಶೈವರು ಪ್ರತ್ಯೇಕ ಧರ್ಮಕ್ಕೆ ಹತ್ತಾರು ವರ್ಷಗಳಿಂದ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಿತಿ ರಚಿಸಿ ವರದಿ ಪಡೆಯಲಾಗಿದ್ದು, ಮಾ.14 ರಂದು ಈ ಕುರಿತ ಚರ್ಚೆ ನಡೆಯಲಿದೆ ಎಂದು ಸಚಿವ ಬಸವರಾಜರಾಯರೆಡ್ಡಿ ತಿಳಿಸಿದರು. ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆದ ಕುರಿತಂತೆ ಮಾತನಾಡಿದ ಅವರು, ಕಳೆದ ವರ್ಷ ವೀರಶೈವ ಮಹಾಸಭಾದಿಂದ ಮುಖ್ಯಮಂತ್ರಿಗಳಿಗೆ ಸನ್ಮಾನ ಮಾಡಿದ ಸಂದರ್ಭದಲ್ಲಿ ಪ್ರತ್ಯೇಕ ವೀರಶೈವ ಲಿಂಗಾಯತ ಧರ್ಮದ ಬೇಡಿಕೆಯನ್ನು ಇಡಲಾಗಿತ್ತು. ಇದಕ್ಕೂ ಎರಡು ದಿನ ಮುಂಚಿತವಾಗಿ ಮಾತೆ ಮಹಾದೇವಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಬೇಡಿಕೆ ಇಟ್ಟಿದ್ದರು. ಪ್ರತ್ಯೇಕ ಧರ್ಮದ ಬೇಡಿಕೆ ವೀರಶೈವ ಮತ್ತು ಲಿಂಗಾಯತ ಸಮುದಾಯದವರಿಂದಲೇ ಬಂದಿದೆ ಎಂದು ಸ್ಪಷ್ಟಪಡಿಸಿದರು.

ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆ ಕುರಿತಂತೆ ನಮ್ಮಲ್ಲಿ ಗೊಂದಲವಿದೆ. ನಾವು ವೀರಶೈವರ ವಿರೋಧಿಯೂ ಅಲ್ಲ, ಪ್ರತ್ಯೇಕ ಲಿಂಗಾಯತ ಧರ್ಮದಿಂದ ಸಮುದಾಯಕ್ಕೆ ಒಳಿತಾಗುತ್ತದೆ ಎಂಬ ಹಿನ್ನೆಲೆಯಲ್ಲಿ ನ್ಯಾ.ನಾಗಮೋಹನ್‍ದಾಸ್ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಪ್ರತ್ಯೇಕ ಲಿಂಗಾಯತ ಧರ್ಮ ಮತ್ತು ಅಲ್ಪಸಂಖ್ಯಾತರ ಸ್ಥಾನಮಾನಕ್ಕೆ ಶಿಫಾರಸು ಮಾಡಿದೆ. ಈ ಸಂಬಂಧ ಸಂಪುಟ ಸಭೆಯಲ್ಲಿ ಚರ್ಚೆ ಅಪೂರ್ಣವಾಗಿದ್ದು, ಸಭೆಯಲ್ಲಿ ತಾತ್ವಿಕವಾಗಿ ಚರ್ಚೆ ನಡೆಸಲಾಗಿದೆ. ಯಾವುದೇ ರೀತಿಯಲ್ಲೂ ವಾದ-ವಿವಾದಗಳು ನಡೆದಿಲ್ಲ. ಇನ್ನು ಈಶ್ವರ್ ಖಂಡ್ರೆ, ಎಸ್.ಎಸ್.ಮಲ್ಲಿಕಾರ್ಜುನ್ ವಿಚಾರ ಮಾತನಾಡಿಲ್ಲ ಎಂದು ತಿಳಿಸಿದರು.

ನ್ಯಾ.ನಾಗಮೋಹನ್‍ದಾಸ್ ಸಮಿತಿ ವರದಿ ಇನ್ನೂ ನಮ್ಮ ಕೈಸೇರಿಲ್ಲ. ಸಭೆಯಲ್ಲಿ ವರದಿ ಪಡೆಯುವ ಬಗ್ಗೆ ಒಪ್ಪಿಗೆ ಪಡೆಯಲಾಗಿದೆ. ಇಂದು ಆ ವರದಿ ಸಂಪುಟ ಸದಸ್ಯರ ಕೈ ಸೇರಲಿದೆ. ಮಾ.14 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ. ನಂತರ ನಿರ್ಧಾರ ಕೈಗೊಳ್ಳಲಿದ್ದೇವೆ. ಈ ಸಂಬಂಧ ಒಮ್ಮತ ಮೂಡುವ ವಿಶ್ವಾಸವೂ ನಮಗಿದೆ ಎಂದು ವಿವರಿಸಿದರು.  ಬಿಜೆಪಿಯವರು ತಾವು ಮಡಿವಂತರು ಎಂದು ಹೇಳಿಕೊಳ್ಳುತ್ತಾರೆ. ಆದರೆ ಅವರೇ ಕೆಟ್ಟ ಪದಗಳನ್ನು ಬಳಸುತ್ತಿದ್ದಾರೆ. ಅವರ ಹೇಳಿಕೆಗಳೇ ಸಂಸ್ಕøತಿಯನ್ನೇ ತೋರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಆಗೆಲ್ಲ ಮಾತನಾಡುವುದು ಸರಿಯಲ್ಲ. ರಾಜಕೀಯವಾಗಿ ಅಸಂಸ್ಕøತವಾಗಿ ಮಾತನಾಡುವುದು ಎಷ್ಟು ಸರಿ. ಪ್ರಧಾನಿಯೊಬ್ಬರು ಬಿಟ್ಟು ಎಲ್ಲಾ ನಾಯಕರೂ ಕೆಟ್ಟ ಪದಗಳನ್ನೇ ಬಳಸುತ್ತಾರೆ ಎಂದು ಟೀಕಿಸಿದರು. ಅಲ್ಪಸಂಖ್ಯಾತರ ಮೀಸಲಾತಿ ನಮಗೆ ಬೇಡ. ಅವರಿಗೆ ತೊಂದರೆ ನೀಡಿ ನಾವು ಮೀಸಲಾತಿ ಪಡೆಯುವುದಿಲ್ಲ. ಮುಂದೆ ತಜ್ಞರ ಅಭಿಪ್ರಾಯ ಪಡೆದು ಮುಂದುವರೆಯುತ್ತೇವೆ ಎಂದು ಮಾಹಿತಿ ನೀಡಿದರು.

Facebook Comments

Sri Raghav

Admin