ಪ್ರಧಾನಮಂತ್ರಿ ಮೋದಿಯವರನ್ನು ಭೇಟಿ ಮಾಡಿದ ಪವರ್ ಸ್ಟಾರ್ ಪುನೀತ್

ಈ ಸುದ್ದಿಯನ್ನು ಶೇರ್ ಮಾಡಿ

Puneet

ಬೆಂಗಳೂರು, ಮೇ 03: ವಿಧಾನಸಭೆ ಚುನಾವಣೆ ಪ್ರಚಾರ ಮಾಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಕುಟುಂಬ ಸಮೇತವಾಗಿ ಭೇಟಿ ಮಾಡಿದ್ದಾರೆ. ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶಕ್ಕಾಗಿ ಆಗಮಿಸಿದ ಮೋದಿ ಅವರನ್ನು ಪುನೀತ್  ಭೇಟಿ ಮಾಡಿದರು. ನಟ ಪುನೀತ್ ಅವರು ತಮ್ಮ ಪತ್ನಿ ಅಶ್ವಿನಿ ಜತೆಗೂಡಿ, ಮೋದಿ ಅವರನ್ನು ಭೇಟಿ ಮಾಡಿ, ಡಾ. ರಾಜ್ ಕುಮಾರ್ ಅವರ ಜೀವನ ಚರಿತ್ರೆ ಪುಸ್ತಕವನ್ನು ಉಡುಗೊರೆಯಾಗಿ ನೀಡಿದರು. ನಂತರ ಈ ಬಗ್ಗೆ ಫೇಸ್ ಬುಕ್ ನಲ್ಲಿ ಫೋಟೋ ಹಾಕಿ ತಮ್ಮ ಸಂತಸವನ್ನು ಪುನೀತ್ ರಾಜ್ ಕುಮಾರ್ ಹಂಚಿಕೊಂಡಿದ್ದಾರೆ. ಚುನಾವಣಾ ಆಯೋಗದ ರಾಯಭಾರಿ ಕೂಡಾ ಆಗಿರುವ ಪುನೀತ್ ಅವರು ಬಿಜೆಪಿ ಸಮಾವೇಶದ ಬಳಿ ಕಾಣಿಸಿಕೊಳ್ಳುವಂತಿಲ್ಲ. ಹೀಗಾಗಿ, ವೇದಿಕೆ ತಲುಪುವುದಕ್ಕೂ ಮುನ್ನವೇ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ತಮ್ಮ ತಂದೆ ಡಾ ರಾಜ್ ಕುಮಾರ್ ಅವರ ಬಗ್ಗೆ ತಾವು ಬರೆದಿರುವ ‘ವ್ಯಕ್ತಿತ್ವದ ಹಿಂದಿರುವ ವ್ಯಕ್ತಿ’ ಪುಸ್ತಕವನ್ನ ಪ್ರಧಾನಿಗೆ ಉಡುಗೊರೆಯಾಗಿ ನೀಡಿ ಗೌರವಿಸಿದರು.

Facebook Comments

Sri Raghav

Admin