ಪ್ರಧಾನಿ ಜೊತೆ ವಿದೇಶಿ ಪ್ರವಾಸಕ್ಕೆ ತೆರಳಿದ್ದ ನಿಯೋಗದ ಸದಸ್ಯರ ಹೆಸರು ತಿಳಿಸುವಂತೆ ಸಿಐಸಿ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Modi--001
ನವದೆಹಲಿ, ಜ.28-ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿದೇಶಿ ಭೇಟಿಗಳಿಗೆ ತೆರಳಿದ್ದ ನಿಯೋಗದ ಸದಸ್ಯರ ಹೆಸರುಗಳನ್ನು ತಿಳಿಸುವಂತೆ ಮುಖ್ಯ ಮಾಹಿತಿ ಆಯುಕ್ತ(ಸಿಐಸಿ) ಆರ್.ಕೆ, ಮಾಥುರ್ ಪ್ರಧಾನಮಂತ್ರಿಯವರ ಕಾರ್ಯಾಲಯಕ್ಕೆ(ಪಿಎಂಒ) ಸೂಚನೆ ನೀಡಿದ್ದಾರೆ.   ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಈ ಮಾಹಿತಿ ಬಹಿರಂಗಗೊಳಿಸಲು ಸಾಧ್ಯವಿಲ್ಲ ಎಂಬ ಪಿಎಂಒ ಆಕ್ಷೇಪವನ್ನು ಮಾಥುರ್ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಇದರಿಂದ ಪಿಎಂಒ ಮತ್ತು ಸಿಐಸಿ ನಡುವೆ ಭಿನ್ನಾಭಿಪ್ರಾಯ ಭುಗಿಲೆದ್ದಿದೆ.

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ, ಭದ್ರತಾ ಸಿಬ್ಬಂದಿ ಮತ್ತು ಪ್ರಧಾನಿಯಮವರ ಭದ್ರತೆಗೆ ನಿಯೋಜನೆಗೊಂಡಿದ್ದ ವ್ಯಕ್ತಿಗಳ ಹೆಸರು ಬಹಿರಂಗಗೊಳ್ಳುವುದಕ್ಕೆ ವಿನಾಯಿತಿ ನೀಡಿರುವ ಮಾಥುರ್, ಉಳಿದವರ ಬಗ್ಗೆ ವಿವಿರ ನೀಡುವಂತೆ ಸೂಚಿಸಿದ್ದಾರೆ.

Facebook Comments

Sri Raghav

Admin