ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಚೀನಿ ವಿದೇಶಾಂಗ ಸಚಿವ

ಈ ಸುದ್ದಿಯನ್ನು ಶೇರ್ ಮಾಡಿ

PM-China-c

ನವದೆಹಲಿ, ಆ.13-ಭಾರತಕ್ಕೆ ಭೇಟಿ ನೀಡಿರುವ ಚೀನಿ ವಿದೇಶಾಂಗ ಸಚಿವ ವಾಂಗ್ ಯೀ ರಾಜಧಾನಿಯಲ್ಲಿ ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಭಾರತದೊಂದಿಗೆ ಪರಸ್ಪರ ಹಿತಾಸಕ್ತಿಯ ವಿವಿಧ ವಿಷಯಗಳ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಸುಷ್ಮಾ ಸ್ವರಾಜ್ ಅವರೊಂದಿಗೆ ಮಾತುಕತೆ ನಡೆಸಲು ವಾಂಗ್ ದೆಹಲಿಯಲ್ಲಿದ್ದಾರೆ.  ಅಕ್ಟೋಬರ್‍ನಲ್ಲಿ ಕರಾವಳಿ ರಾಜ್ಯ ಗೋವಾದಲ್ಲಿ ಬ್ರಿಕ್ಸ್ ಶೃಂಗಸಭೆ ನಡೆಯಲಿದ್ದು, ಚೀನಿ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಆಗಮಿಸಲಿದ್ದಾರೆ. ಈ ಸಂಬಂಧ ವಾಂಗ್ ನಿನ್ನೆ ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೆಕರ್ ಅವರೊಂದಿಗೆ ಚರ್ಚೆ ನಡೆಸಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin