ಪ್ರಧಾನಿ ಮೋದಿ ಅವರನ್ನ ಹೊಗಳಿದ ಪಾಟೀಲ್ ಪುಟ್ಟಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

patil

ಹುಬ್ಬಳ್ಳಿ,ಆ.6-ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ಒಳ್ಳೆಯ ತಿರ್ಮಾನಕ್ಕೆ ಬಂದಿದೆ ಎಂದು ಹಿರಿಯ ಪತ್ರಕರ್ತ, ನಾಡೋಜ ಪಾಟೀಲ ಪುಟ್ಟಪ್ಪ ಹೇಳಿದ್ದಾರೆ. ಕಳೆದ ಸ್ವತಂತ್ರ ಪೂರ್ವ 1924 ರ ಒಡಂಬಡಿಕೆ ಅನ್ವಯ ಮಾಡಿಕೊಂಡಿದ್ದರಿಂದ ನಮ್ಮಗೆ ಅನ್ಯಾಯವಾಗಿತ್ತು ಅದನ್ನ ಸರಿ ಪಡೆಸುವ ಪ್ರಯತ್ನ ಪ್ರಧಾನಿ ನರೇಂದ್ರ ಮೋದಿಯವರು ಕೈಗೊಂಡಿದ್ದಾರೆ. ಹಾಗಾಗಿ ಅವರನ್ನು ನಾವು ಅಭಿನಂದನ ಮಾಡಬೇಕು ಎಂದು ತಿಳಿಸಿದ್ದಾರೆ ಮಹದಾಯಿ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ರಾಜ್ಯ ಸರಕಾರ ಮಹದಾಯಿ ಹೋರಾಟದಲ್ಲಿ ಭಾಗಿಯಾದ ರೈತರ ಮೇಲಿನ ಎಲ್ಲ ಪ್ರಕರಣಗಳನ್ನು ವಾಪಸ್ಸ್ ಪಡೆಯಬೇಕು ಎಂದು ಪಾಟೀಲ್ ಪುಟ್ಟಪ್ಪ ಒತ್ತಾಯಿಸಿದ್ದಾರೆ.

 

 

► Follow us on –  Facebook / Twitter  / Google+

Facebook Comments

Sri Raghav

Admin