ಪ್ರಧಾನಿ ಮೋದಿ ಭದ್ರತೆಗೆ ಬಂದಿದ್ದ ಎಸ್‍ಐ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Suicide-002

ಹೈದರಾಬಾದ್,ನ.26– ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶಿತ ಭೇಟಿ ಹಿನ್ನೆಲೆಯಲ್ಲಿ ಭದ್ರತೆಗಾಗಿ ನಿಯೋಜಿತರಾಗಿದ್ದ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಒಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಇಲ್ಲಿನ ಎಸ್‍ವಿಪಿ  ನ್ಯಾಷನಲ್ ಪೊಲೀಸ್ ಅಕಾಡೆಮಿ ಸಮೀಪ ನಡೆಯಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಇಂದು ಮೋದಿ ಮಾತನಾಡುವ ಕಾರ್ಯಕ್ರಮವಿತ್ತು. ಆದ್ದರಿಂದ ಬಿಗಿಭದ್ರತೆ ಏರ್ಪಡಿಸಿದ್ದು ಭದ್ರತೆಗೆ ನಿಯುಕ್ತಿಗೊಂಡಿದ್ದ ಶ್ರೀಧರ್ ಎಂಬ ಇನ್ಸ್‍ಪೆಕ್ಟರ್ ಅಲ್ಲಿಯೇ ಇರುವ ಮೈಲಾರದೇವಪಲ್ಲಿ ಅಪಾರ್ಟ್‍ಮೆಂಟ್‍ನಲ್ಲಿ ಸಾವಿಗೆ ಶರಣಾಗಿದ್ದಾರೆ.

ಅಪಾರ್ಟ್‍ಮೆಂಟ್‍ನ 19ನೇ ಮಹಡಿಯಲ್ಲಿ ಶ್ರೀಧರ್ ತಮ್ಮ ಸರ್ವಿಸ್ ರಿವಾಲ್ವರ್‍ನಿಂದಲೇ ಗುಂಡು ಹೊಡೆದುಕೊಂಡು ಸಾವಿಗೆ ಶರಣಾಗಿದ್ಧಾರೆ. ಶ್ರೀಧರ್ ಮೂಲತಃ ವಾರಂಗಲ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಧಾನಿ ಮೋದಿ ಭೇಟಿ ಭದ್ರತೆಗಾಗಿ ಇಲ್ಲಿಗೆ ಬಂದಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin