ಪ್ರಭಾವಿಗಳ ಒತ್ತುವರಿ ತೆರವಿಗೆ ಕಾಲಾವಕಾಶಬೇಕು : ಮೇಯರ್ ಮಂಜುನಾಥರೆಡ್ಡಿ

ಈ ಸುದ್ದಿಯನ್ನು ಶೇರ್ ಮಾಡಿ

S-Manjunath-Reddy

ಬೆಂಗಳೂರು, ಆ.26-ಯಾವ ಪ್ರಭಾವಿಗಳ ಒತ್ತುವರಿಯನ್ನು ಉಳಿಸುವ ಇರಾದೆ ನಮಗಿಲ್ಲ. ಎಷ್ಟೇ ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದರೂ ಅವುಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುವುದು ಎಂದು ಮೇಯರ್ ಮಂಜುನಾಥರೆಡ್ಡಿ ಇಂದಿಲ್ಲಿ ಪುನರುಚ್ಚರಿಸಿದರು.  ರಾಜಕಾಲುವೆ ಒತ್ತುವರಿ ತೆರವು ವಿಚಾರದಲ್ಲಿ ಯಾವುದೇ ರೀತಿಯ ಒತ್ತಡ ನಮ್ಮ ಮೇಲೆ ಇಲ್ಲ. ಅಕ್ರಮ ಕಂಡ ಕೂಡಲೇ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಈಗಾಗಲೇ ಮಹದೇವಪುರ ವಲಯದಲ್ಲಿ ಆಂಧ್ರ ಮೂಲದ ರಾಜಕಾರಣಿ ಸೇರಿದಂತೆ ದೊಡ್ಡ ದೊಡ್ಡ ಬಿಲ್ಡಿಂಗ್ಗಳ ಒತ್ತುವರಿ ತೆರವುಗೊಳಿಸಲಾಗಿದೆ. ಎಲ್ಲಾ ಕಡೆ ಸರ್ವೆ ಕಾರ್ಯ ನಡೆಯುತ್ತಿದೆ. ವರದಿ ಬಂದ ಕೂಡಲೇ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುವುದು ಎಂದರು.

ಖಾಲಿ ಪ್ರದೇಶಗಳನ್ನು ಸುಲಭವಾಗಿ ಸರ್ವೆ ಮಾಡಬಹುದು. ಆದರೆ ಕಟ್ಟಡಗಳಿರುವ ಪ್ರದೇಶಗಳನ್ನು ಸರ್ವೆ ಮಾಡುವುದು ಕಷ್ಟಸಾಧ್ಯ. ಹೀಗಾಗಿ ತೆರವು ಕಾರ್ಯ ಸ್ವಲ್ಪ ವಿಳಂಬವಾಗಿದೆ ಅಷ್ಟೆ ಎಂದು ಹೇಳಿದರು.  ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ನಾಗರಿಕರಿಂದ ಉತ್ತಮ ಸಹಕಾರ ಸಿಗುತ್ತಿದೆ. ಒಂದೇ ದಿನ ಎಲ್ಲಾ ಕಟ್ಟಡ ಕೆಡವಲು ಸಾಧ್ಯವಿಲ್ಲ, ಕಾಲಾವಕಾಶ ಬೇಕು. ಎಷ್ಟೇ ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದರೂ ಅವುಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುವುದು, ಅದೇ ರೀತಿ ಒತ್ತುವರಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ಧವೂ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin