ಪ್ರಾಸಿಕ್ಯೂಷನ್ ವಿಫಲವಾಗಿದ್ದರಿಂದ ತೀರ್ಪು ಸಫಲ : ಬಿಎಸ್‍ವೈ ಪರ ವಕೀಲ ಸಿ.ವಿ.ನಾಗೇಶ್

ಈ ಸುದ್ದಿಯನ್ನು ಶೇರ್ ಮಾಡಿ

Nagesh

ಬೆಂಗಳೂರು, ಅ.26– ಆರೋಪಿತರ ಮೇಲೆ ಆರೋಪ ಹೊರಿಸಿದವರು ಆರೋಪವನ್ನು ಸಾಬೀತು ಪಡಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನ್ಯಾಯಾಲಯ ಬಿಎಸ್‍ವೈ ಹಾಗೂ ಇತರರನ್ನು ದೋಷ ಮುಕ್ತ ಎಂದು ಪರಿಗಣಿಸಿ ತೀರ್ಪು ನೀಡಿದೆ ಎಂದು ಬಿಎಸ್‍ವೈ ಪರ ವಕೀಲ ಸಿ.ವಿ.ನಾಗೇಶ್ ತಿಳಿಸಿದರು. ನಲವತ್ತು ಕೋಟಿ ರೂ. ಕಿಕ್‍ಬ್ಯಾಕ್ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಆರೋಪಗಳನ್ನು ಹೊರಿಸಿದವರು ಆರೋಪ ಸಾಬೀತುಪಡಿಸುವಲ್ಲಿ ಸಂಪೂರ್ಣ ವಿಫಲವಾದ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಹಾಗೂ ಇತರರನ್ನು ದೋಷ ಮುಕ್ತ ಎಂದು ನ್ಯಾಯಾಲಯ ತೀರ್ಪು ನೀಡಿದೆ ಎಂದು ಅವರು ಇಂದು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಆರೋಪ ಮಾಡಿದವರು ಯಾವುದೇ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿದ್ದಾರೆ ಎಂದು ಹೇಳಿದರು.

► Follow us on –  Facebook / Twitter  / Google+

Facebook Comments

Sri Raghav

Admin