ಫಿಲಿಪ್ಪೈನ್ಸ್’ನಲ್ಲಿ ಭೀಕರ ಬಸ್ ಅಪಘಾತ, 18 ಜನ ಸಾವು
ಈ ಸುದ್ದಿಯನ್ನು ಶೇರ್ ಮಾಡಿ
ಟನೈ (ಫಿಲಿಪ್ಪೈನ್ಸ್), ಫೆ.21-ಕಾಲೇಜು ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಸ್ಸೊಂದು ಭೀಕರ ಅಪಘಾತಕ್ಕೀಡಾಗಿ 18 ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ದುರ್ಘಟನೆ ಫಿಲಿಪೈನ್ಸ್ನ ರಾಜಧಾನಿ ಮನಿಲಾದ ಪೂರ್ವ ಭಾಗದಲ್ಲಿರುವ ರಿಜಲ್ ಪ್ರಾಂತ್ಯದ ಟನೈ ಪಟ್ಟಣದಲ್ಲಿ ಸಂಭವಿಸಿದೆ. ಕ್ಯಾಂಪ್ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಇಳಿಜಾರಿನಲ್ಲಿ ಬ್ರೇಕ್ ವೈಫಲ್ಯದಿಂದ ವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ಅಪ್ಪಳಿಸಿತು. ಈ ಭೀಕರ ದುರಂತದಲ್ಲಿ 18 ಮಂದಿ ಮೃತರಾಗಿ 44 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ ಎಂದು ಅವರು ತಿಳಿಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments