ಫೆ.1ರಂದು ಆದಿವಾಸಿ ಜನಾಂಗದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಈ ಸುದ್ದಿಯನ್ನು ಶೇರ್ ಮಾಡಿ

Anjaneya

ಮೈಸೂರು, ಜ.28- ಅರಣ್ಯ ವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡುವ ಕಾರ್ಯ ಆರಂಭವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.   ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.1ರಂದು ಆದಿವಾಸಿ ಜನಾಂಗದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯ ಕ್ರಮ ಮೈಸೂರಿನ ದಸರಾ ವಸ್ತುಪ್ರದರ್ಶನ ಕೇಂದ್ರದ ಆವರಣದಲ್ಲಿ ನಡೆಯಲಿದೆ ಎಂದು ಹೇಳಿದರು.   ಮೂರು ತಲೆಮಾರುಗಳಿಂದ ಅರಣ್ಯದಲ್ಲಿ ವಾಸ ಮಾಡುತ್ತಿರುವ ಬಗ್ಗೆ ದಾಖಲೆಗಳನ್ನು ಒದಗಿಸುವ ಆದಿವಾಸಿಗಳಿಗೆ ಹಕ್ಕುಪತ್ರ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.  ಹಕ್ಕುಪತ್ರ ವಿತರಣಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಸೇರಿದಂತೆ ಶಾಸಕರು, ಸ್ಥಳೀಯಮುಖಂಡರು ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಿದರು.

ಆದಿವಾಸಿ ಕುಟುಂಬಗಳಿಗೂ ಪೌಷ್ಠಿಕ ಆಹಾರ ನೀಡುವ ವ್ಯವಸ್ಥೆ ಜಾರಿಯಲ್ಲಿದೆ. ಚಿಕ್ಕಮಗಳೂರು ಸೇರಿದಂತೆ ಏಳು ಜಿಲ್ಲೆಗಳ ಹಾಡಿಗಳಲ್ಲಿ ನಾನು ವಾಸ್ತವ್ಯ ಹೂಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿ ಅವರಿಗೆ ಸಲ್ಲಬೇಕಾದ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದ್ದೇನೆ ಎಂದು ತಿಳಿಸಿದರು.   ಕೇರಳದಲ್ಲಿ ಆದಿವಾಸಿಗಳಿಗೆ ಸರ್ಕಾರ ನೀಡುತ್ತಿರುವ ವಿಶೇಷ ಶಿಕ್ಷಣ ನೀತಿಯನ್ನು ನಮ್ಮ ರಾಜ್ಯದಲ್ಲೂ ಕೂಡ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದರು.   ಹಾಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದನ್ನು ತಡೆಯುವ ಸಲುವಾಗಿ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಕಿರಾಣಿ ಅಂಗಡಿ, ಜೂಸ್ ಅಂಗಡಿಗಳ ಮೇಲೆಯೂ ನಿಗಾ ಇಡಲಾಗಿದೆ. ಇದನ್ನು ತಡೆಗಟ್ಟುವ ಸಲುವಾಗಿ ಹೊಸ ಮದ್ಯದಂಗಡಿಗಳಿಗೆ ಲೈಸೆನ್ಸ್ ನೀಡಿದರೆ ಸರ್ಕಾರದ ವಿರುದ್ಧ ಮಾಧ್ಯಮಗಳ ಪ್ರತಿನಿಗಳಾದ ನೀವೇ ಟೀಕಾ ಪ್ರಹಾರ ಮಾಡುತ್ತೀರಿ. ಹೀಗಿರುವಾಗ ನಾವು ಅಕ್ರಮ ಮದ್ಯ ತಡೆಗೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವುದಾದರೂ ಹೇಗೆ ಎಂದು ಪ್ರಶ್ನಿಸಿದರು. ಇದೇ ವೇಳೆ ಕೆಲ ಮಾಧ್ಯಮದವರು ಸಚಿವರ ಹೇಳಿಕೆಯನ್ನು ತೀಕ್ಷ್ಣವಾಗಿ ಪ್ರಶ್ನಿಸಿದಾಗ, ರಾಷ್ಟ್ರಮಟ್ಟದಲ್ಲಿ ಕೇಂದ್ರ ಮದ್ಯ ನಿಷೇಧ ಮಾಡಲಿ. ಕಟ್ಟುನಿಟ್ಟಾಗಿ ರಾಜ್ಯ ಸರ್ಕಾರ ಪಾಲಿಸುತ್ತವೆ ಎಂದು ಹೇಳಿದರು.

ಪಕ್ಷಕ್ಕೆ ಬರುವವರಿಗೆ ಸ್ವಾಗತ: ಈಗಾಗಲೇ ಅನ್ಯ ಪಕ್ಷಗಳಿಂದ ಕಾಂಗ್ರೆಸ್‍ಗೆ ಬರುವವರಿಗೆ ಮುಕ್ತ ಸ್ವಾಗತವಿದೆ. ಇದೇ ರೀತಿ ಜೆಡಿಎಸ್‍ನಿಂದ ಅಮಾನತುಗೊಂಡಿರುವ ಶಾಸಕರು ಪಕ್ಷಕ್ಕೆ ಬಂದರೂ ಅಭ್ಯಂತರವೇನಿಲ್ಲ. ಆದರೂ ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದೇವೆ. ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.  ಸುದ್ದಿಗೋಷ್ಠಿಯಲ್ಲಿ ಶಾಸಕ ಎಂ.ಕೆ.ಸೋಮಶೇಖರ್, ವಸ್ತುಪ್ರದರ್ಶನ ಕೇಂದ್ರದ ಅಧ್ಯಕ್ಷ ಸಿದ್ದರಾಜು, ಜಿಲ್ಲಾಕಾರಿ ರಂದೀಪ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

 

 

Facebook Comments

Sri Raghav

Admin