ಫ್ಲಾಟ್‍ನಲ್ಲಿ ಬಂಧಿಸಿಟ್ಟು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಈ ಸುದ್ದಿಯನ್ನು ಶೇರ್ ಮಾಡಿ

RaPE

ಗುರ್‍ಗಾಂವ್, ಆ.11- ಹತ್ತನೆ ತರಗತಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಇಬ್ಬರು ಯುವಕರು ಎರಡು ದಿನಗಳ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ದಕ್ಷಿಣ ದೆಹಲಿಯ ಕಲ್‍ಕಾಜಿ ಪ್ರದೇಶದಲ್ಲಿ ನಡೆದಿದೆ.  ಗುರ್‍ಗಾಂವ್ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 16 ವರ್ಷದ ವಿದ್ಯಾರ್ಥಿನಿಯನ್ನು ಫ್ಲಾಟ್‍ನಲ್ಲಿ ಅಕ್ರಮ ಬಂಧನದಲ್ಲಿಟ್ಟು ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.  ವಿದ್ಯಾರ್ಥಿನಿ ಮೇಲೆ ಕರಣ್‍ಸಿಂಗ್ ಮತ್ತು ಸಂಜಯ್‍ಕುಮಾರ್ ಗ್ಯಾಂಗ್‍ರೇಪ್ ನಡೆಸಿದರೆ, ಇನ್ನಿಬ್ಬರು ಆರೋಪಿಗಳಾದ ಮಹೇಶ್ ಮತ್ತು ಕಾಲ ಇಡೀ ಕೃತ್ಯವನ್ನು ಮೊಬೈಲ್‍ನಲ್ಲಿ ಚಿತ್ರೀಕರಿಸಿದ್ದಾರೆ.  ಈ ಕುಕೃತ್ಯ ನಡೆಸಿದ ಆರೋಪಿಗಳು ವಿದ್ಯಾರ್ಥಿನಿಗೆ ಪರಿಚಿತರಾಗಿದ್ದಾರೆ. ಈ ಸಂಬಂಧ ದೂರು ದಾಖಲಾಗಿದ್ದು, ಆರೋಪಿಗಳು ನಾಪತ್ತೆಯಾಗಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin