ಬಂಡೀಪುರದಲ್ಲಿ ಮತ್ತೆ ಬೆಂಕಿ, ಕಿಡಿಗೇಡಿಗಳ ಕೈವಾಡ

ಈ ಸುದ್ದಿಯನ್ನು ಶೇರ್ ಮಾಡಿ

Bandipura-01

ಬಂಡೀಪುರ, ಫೆ.24– ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು ಆತಂಕ ಮುಂದುವರೆದಿದೆ. ಕೆಲವು ಕಿಡಿಗೇಡಿಗಳು ಈ ಕೃತ್ಯ ನಡೆಸಿರಬಹುದೆಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಮದ್ದೂರು ವಲಯದಲ್ಲಿ ಕಳೆದ ರಾತ್ರಿ ಕಾಣಿಸಿಕೊಂಡ ಬೆಂಕಿಯನ್ನು ಅತೋಟಿಗೆ ತರಲು ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಪ್ರದೇಶದಲ್ಲಿ ಸಂಚರಿಸುವ ವಾಹನಗಳನ್ನು ತಡೆಯಲಾಗಿದ್ದು, ಅಕ್ಕಪಕ್ಕದ ಗ್ರಾಮಸ್ಥರ ಮೇಲೂ ಕಣ್ಣಿಡಲಾಗಿದೆ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ.

ಚಾಮರಾಜನಗರ ವರದಿ:
ಬಿಳಿಗಿರಿರಂಗನಬೆಟ್ಟದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲೂ ಬೆಂಕಿ ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಸಂಪತ್ತು ನಾಶಗೊಂಡಿದೆ.  ಕಳೆದ ರಾತ್ರಿಯಿಂದ ಬೆಂಕಿ ನಂದಿಸಲು ಕಾರ್ಯಾಚರಣೆ ಆರಂಭಿಸಲಾಗಿದ್ದು, ಸ್ವಲ್ಪ ಮಟ್ಟಿಗೆ ಹತೋಟಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.  ತಮಿಳುನಾಡು ಗಡಿಗೆ ಅಂಟಿಕೊಂಡಿರುವ ಪುಣಚೂರು, ಬೆಡಗುಳಿ, ಹಾಸನೂರು ಅರಣ್ಯಪ್ರದೇಶದಲ್ಲಿ ಈಗಾಗಲೇ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದಾರೆ. ಗಾಳಿ ಜೋರಾಗಿ ಬೀಸುತ್ತಿರುವುದರಿಂದ ಇದು ಅಪಾಯದ ಕಾರ್ಯಾಚರಣೆ. ಹಾಗಾಗಿ ಎಚ್ಚರಿಕೆಯಿಂದಿರುವಂತೆ ಅಧಿಕಾರಿಗಳು ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin