ಬಂದ್‍ನಿಂದ ತೀರ್ಪು ಬದಲಾಗಲ್ಲ : ಎಂ.ಬಿ.ಪಾಟೀಲ್

ಈ ಸುದ್ದಿಯನ್ನು ಶೇರ್ ಮಾಡಿ

mb--patil

ಬೆಂಗಳೂರು, ಸೆ.9- ಇಂದು ರಾಜ್ಯದಲ್ಲಿ ನಡೆಸಿದ ಬಂದ್ ಆಚರಣೆಯಿಂದ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಬದಲಾಗು ವುದಿಲ್ಲ. ಆದರೆ, ನಮ್ಮ ರಾಜ್ಯದ ಜನರ ಭಾವನೆಗಳನ್ನು ರಾಜ್ಯ ಸರ್ಕಾರ ಅರ್ಥಮಾಡಿಕೊಂಡಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಕೂಡ ನಮ್ಮ ರಾಜ್ಯದ ಸಂಕಷ್ಟ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕಿದೆ.

ನಮ್ಮ ರೈತರ ಮೊದಲನೆ ಬೆಳೆಗೆ ನೀರಿಲ್ಲದೆ ತೊಂದರೆ ಉಂಟಾಗಿದೆ ಎಂದರು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಕಾನೂನು ಹೋರಾಟ ಮುಂದುವರಿಸಲಿದ್ದು, ಸೋಮವಾರ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಮಾರ್ಪಾಡು ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದರು.ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಹಿಂದೆ ತೆಗೆದುಕೊಂಡ ಸುಗ್ರೀವಾಜ್ಞೆ ನಿರ್ಣಯವನ್ನು ನಮ್ಮ ಸರ್ಕಾರ ಈಗ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin