ಬಗರ್‍ಹುಕುಂ ಅರ್ಜಿದಾರರಿಗೆ ಜಮೀನು ನೀಡಲು ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

beluru

ಬೇಲೂರು, ಫೆ.10- ಹೊನ್ನೇನಹಳ್ಳಿ ಹಾಗೂ ದೂಡ್ಡಿಹಳ್ಳಿಯಲ್ಲಿ ಬಗರ್‍ಹುಕುಂ ಅಡಿಯಲ್ಲಿ ಅರ್ಜಿಸಲ್ಲಿಸಿರುವ ರೈತರಿಗೆ ಮೂದಲು ಜಮೀನು ನೀಡಿ ಅನಂತರ ಬುಡಕಟ್ಟು ಜನಾಂಗದವರಿಗೆ ಜಮೀನನ್ನು ನೀಡಬೇಕೆಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಳ್ಳೂರು ಸ್ವಾಮಿಗೌಡ ಸರ್ಕಾರವನ್ನು ಒತ್ತಾಯಿಸಿದರು.ಪತ್ರಿಕಾಗೊಷ್ಟಿಯಲ್ಲಿ ಮಾತನಾಡಿದ ಅವರು, ಹೋನ್ನೆನನಳ್ಳಿ ಹಾಗೂ ದೋಡ್ಡಿಹಳ್ಳಿ ಗ್ರಾಮಗಳಲ್ಲಿ ನಮೂನೆ 50, 53 ರಲ್ಲಿ ಅರ್ಜಿ ಸಲ್ಲಿಸಿ ಜಮೀನು ಉಳುಮೆ ಮಾಡುತ್ತಿರುವ ರೈತರ ಮೇಲೆ ದೌರ್ಜನ್ಯ ವೆಸಗುತ್ತಿದ್ದು ಇದರಿಂದ ನಿಜವಾದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.ಕೆಲವರ ಕುಮ್ಮಕ್ಕಿನಿಂದ ಸಂಘರ್ಷವಾಗುವ ಸಾಧ್ಯತೆಗಳು ಕಂಡುಬರುತ್ತಿವೆ. ತಹಶಿಲ್ದಾರ್, ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾದಿಕಾರಿಗಳು ಸಹ ಬುಡಕಟ್ಟು ಜನರು ರೈತರ ಜಮೀನಿಗೆ ಪ್ರವೇಶ ಮಾಡಿರುವುದು ಆಕ್ರಮ.

ಈ ಕೂಡೆಲೆ ಸ್ಥಳೀಯ ಆಡಳಿತ ಸರ್ಕಾರ ಈ ವಿಷಯದಲ್ಲಿ ಹೆಚ್ಚಿನ ನಿಗಾವಹಿಸಿ ಈ ಸಮಸ್ಯೆಯನ್ನು ಬಗೆಹರಿಸಿಕೊಡಬೇಕು. ಇಲ್ಲದಿದ್ದಲ್ಲಿ ರೈತ ಸಂಘ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.ತಾಲ್ಲೂಕು ರೈತಸಂಘದ ಅಧ್ಯಕ್ಷ ಭೋಗ ಮಲ್ಲೇಶ್ ಮಾತನಾಡಿ, ಹುಕುಂ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ರೈತರಿಗೆ ಭೂ ರಹಿತರು ಎಂದು ಪ್ರಮಾಣ ಪತ್ರ ನೀಡಬೇಕಾಗಿರುವ ಗ್ರಾಮ ಲೆಕ್ಕಾಧಿಕಾರಿಗಳು ರೈತರೊಂದಿಗೆ ಸರಿಯಾದ ರೀತಿಯಲ್ಲಿ ಸ್ಪಂದಿಸದೆ ರೈತರನ್ನು ಆಟವಾಡಿಸುತ್ತಿದ್ದಾರೆ. ವಾರದಲ್ಲಿ ಎರಡು ದಿನ ಗ್ರಾಮ ಲೆಕ್ಕಾಧಿಕಾರಿಗಳು ಕಚೇರಿಯಲ್ಲೆ ಕುಳಿತು ರೈತರ ಕೆಲಸವನ್ನು ಮಾಡುವಂತ ವ್ಯವಸ್ಥೆ ಕಲ್ಪಿಸಬೇಕು ಎಂದರು.ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡ ಬಸವೇಗೌಡ ಹಾಜರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin