ಬಜೆಟ್ ಅಧಿವೇಶನದಲ್ಲಿ ಸಮಗ್ರ ಚರ್ಚೆ ಬಗ್ಗೆ ಪ್ರಧಾನಿ ವಿಶ್ವಾಸ

ಈ ಸುದ್ದಿಯನ್ನು ಶೇರ್ ಮಾಡಿ

MOdi-01

ನವದೆಹಲಿ, ಜ.31- ಬಜೆಟ್ ಅಧಿವೇಶನದ ವೇಳೆ ಸಮಾಜದ ಹಿತಾಸಕ್ತಿಗಾಗಿ ಸಮಗ್ರ ಚರ್ಚೆ ನಡೆಯಲಿದೆ ಎಂಬ ವಿಶ್ವಾಸವನ್ನು ಪ್ರಧಾನಿ ನರೇಂದ್ರಮೋದಿ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆಗೆ ಅಡ್ಡಿಯಾಯಿತು. ಆದರೆ, ಬಜೆಟ್ ಅಧಿವೇಶನದ ವೇಳೆ ಎಲ್ಲ ರಾಜಕೀಯ ಪಕ್ಷಗಳು ಸಮಗ್ರ ಚರ್ಚೆಯಲ್ಲಿ ಭಾಗವಹಿಸುತ್ತವೆ ಎಂಬ ಆಶಾಭಾವನೆ ಇದೆ ಎಂದರು.

ಸದನದ ಕಲಾಪಗಳು ಸುಗಮವಾಗಿ ನಡೆಯುವಂತಾಗಲು ನಿನ್ನೆ ಸರ್ಕಾರವು ಸರ್ವಪಕ್ಷಗಳೊಂದಿಗೆ ನಡೆಸಿದ ಸಭೆ ಫಲಪ್ರದವಾಗಿದೆ. ಹೀಗಾಗಿ ಬಜೆಟ್ ಅಧಿವೇಶನಕ್ಕೆ ಯಾವುದೇ ಅಡ್ಡಿಯಾಗದು ಎಂದು ಮೋದಿ ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin