ಬಜೆಟ್ ಘೋಷಣೆಯಾಗಿರುವ 302 ಪಶು ಚಿಕಿತ್ಸಾಲಯಗಳನ್ನು ಮೇಲ್ದರ್ಜೆಗೇರಿಸಲು ಚಿಂತನೆ

ಈ ಸುದ್ದಿಯನ್ನು ಶೇರ್ ಮಾಡಿ

A-Manju--001

ಬೆಂಗಳೂರು,ಜೂ.9-ಪ್ರಸಕ್ತ ಸಾಲಿನ ಬಜೆಟ್ ಘೋಷಣೆಯಾಗಿರುವ 302 ಪ್ರಾಥಮಿಕ ಮತ್ತು ಪಶು ಚಿಕಿತ್ಸಾ ಕೇಂದ್ರಗಳನ್ನು ಪಶು ಚಿಕಿತ್ಸಾಲಯಗಳನ್ನಾಗಿ ಮೇಲ್ದರ್ಜೆ ಗೇರಿಸಲು ಚಿಂತನೆ ಮಾಡಲಾಗಿದೆ ಎಂದು ಪಶು ಸಂಗೋಪನಾ ಸಚಿವ ಎ.ಮಂಜು ತಿಳಿಸಿದರು. ಪ್ರಶ್ನೊತ್ತರ ವೇಳೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ಗ್ರಾಮಗಳಲ್ಲಿ ಪಶುವೈದ್ಯಕೀಯ ಸೇವೆ ಒದಗಿಸುವ ಗುರಿ ಹೊಂದಲಾಗಿದೆ. ಹಂತ ಹಂತವಾಗಿ 1512 ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳನ್ನು ಪಶು ಚಿಕಿತ್ಸಾಲಯಗಳನ್ನಾಗಿ ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದೆ ಎಂದರು.302 ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳನ್ನು ಪಶು ಚಿಕಿತ್ಸಾಲಯಗಳಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕ ಕೂಡಲೇ ಈ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.   ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಆದ್ಯತೆ ಮೇರೆಗೆ ಪ್ರಾಥಮಿಕ ಪಶು ಚಿಕಿತ್ಸಾಲಯಗಳನ್ನಾಗಿ ಮೇಲ್ದರ್ಜೆಗೇರಿಸಲು ಪರಿಶೀಲನೆ ನಡೆಸಲಾಗಿದೆ. ಪ್ರಸಕ್ತ ಸಾಲಿನಿಂದ ಇದು ಜಾರಿಗೆ ಬರಲಿದೆ ಎಂದರು.  ಮಾರ್ಗಸೂಚಿ ಪ್ರಕಾರ ಐದು ಸಾವಿರ ಜಾನುವಾರುಗಳಿಗೆ ಒಂದು ಪಶು ಆಸ್ಪತ್ರೆ ನಿರ್ಮಿಸಲಾಗುವುದು ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin