ಬಯೋಕಾನ್ನಲ್ಲಿ ಅಗ್ನಿ ದುರಂತ : ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕದಳದ ಸಿಬ್ಬಂದಿ ಯಶಸ್ವಿ
ಈ ಸುದ್ದಿಯನ್ನು ಶೇರ್ ಮಾಡಿ
ಬೆಂಗಳೂರು, ಡಿ.13-ದೇಶದಲ್ಲಿ ಪ್ರತಿಷ್ಠಿತ ಔಷಧ ತಯಾರಿಕಾ ಬಯೋಕಾನ್ನಲ್ಲಿ ಕಾಣಿಸಿಕೊಂಡಿದ್ದ ಅಗ್ನಿಯನ್ನು ಮುಂಜಾನೆ 6 ಗಂಟೆವರೆಗೂ ಸತತ ಕಾರ್ಯಾಚರಣೆ ನಡೆಸಿ ನಂದಿಸುವಲ್ಲಿ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಜಿಗಣಿ, ಬೊಮ್ಮಸಂದ್ರ ಲಿಂಕ್ ರಸ್ತೆಯಲ್ಲಿರುವ ಬಯೋಕಾನ್ ಔಷಧ ತಯಾರಿಕಾ ಕಂಪನಿಯಲ್ಲಿ ರಾತ್ರಿ 8 ಗಂಟೆ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ತಕ್ಷಣ 18 ಅಗ್ನಿಶಾಮಕ ವಾಹನದೊಂದಿಗೆ ಆಗಮಿಸಿದ ಸಿಬ್ಬಂದಿಗಳು ಹಾಗೂ ಪೊಲೀಸರು ಸೇರಿ ನೂರು ಮಂದಿ ರಾತ್ರಿಯಿಡೀ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು.
ಇಂದು ಬೆಳಗ್ಗೆ 6 ಗಂಟೆ ವೇಳೆಗೆ ಬೆಂಕಿ ತಹಬದಿಗೆ ಬಂದಿತು. ಬೆಂಕಿಯ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಬೆಂಕಿಯ ಅವಘಡದಿಂದಾಗಿ ಉಂಟಾದ ನಷ್ಟದ ಅಂದಾಜು ಸದ್ಯ ತಿಳಿದುಬಂದಿಲ್ಲ. ಹೆಬ್ಬಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Facebook Comments